Showing posts with label ದೃಷ್ಟಿ ತಾಕೀತೋ ಬೀದಿ ಮೆಟ್ಟಬ್ಯಾಡವೋ rangavittala. Show all posts
Showing posts with label ದೃಷ್ಟಿ ತಾಕೀತೋ ಬೀದಿ ಮೆಟ್ಟಬ್ಯಾಡವೋ rangavittala. Show all posts

Wednesday 11 December 2019

ದೃಷ್ಟಿ ತಾಕೀತೋ ಬೀದಿ ಮೆಟ್ಟಬ್ಯಾಡವೋ ankita rangavittala

ಆನಂದಭೈರವಿ ಆದಿತಾಳ

ದೃಷ್ಟಿ ತಾಕೀತೋ ಬೀದಿ ಮೆಟ್ಟಬ್ಯಾಡವೋ
ಸೃಷ್ಟಿಯ ನಾರಿಯರೆಲ್ಲ ಕಣ್ಣಿಟ್ಟು ಹೀರುವರೋ ನಿನ್ನ ||ಪ||

ಪುಟ್ಟ ಪದಕಮಲದಿ ಮೆಟ್ಟಿ ರತುನ ಪಾದುಕಾ
ಇಟ್ಟ ಕಿರುಗೆಜ್ಜೆ ಪೆಂಡ್ಯೆ ದಿಟ್ಟತನದಿ
ಘಟ್ಟಿ ಸಾಸಿರ ಬಾಳುವ ಪಟ್ಟೆಯನೆ ಬಿಗಿ -
ದುಟ್ಟು ಮೇಗಿಲ್ಲದೆ ಬೆಲೆಯಾದ ಪಟ್ಟದುಡುದಾರವಿಟ್ಟು ||೧||

ಸಿರಿಯಿರುವ ಉರದಲ್ಲಿ ಪರಿಮಳ ಗಂಧವ ಪೂಸಿ
ಪರಿಪರಿ ಪದಕ ಮುತ್ತು ಸರ ವೈಜಯಂತಿ
ಕೊರಳ ಕೌಸ್ತುಭ ಕಾಂತಿ ನಿರುಪಮ ಶ್ರೀವತ್ಸಲಾಂಛನ
ಸರಿಗೆ ತಾಳಿ ಪದಕವು ಸೇರಿದ ಮುತ್ತ್ತಿನ ಜಲ್ಲೆ ||೨||

ಉಗುರ ಗೋರಂಟಿ ಛಾಯಾ ಚಿಗುರು ಪೋಲುವ ಬೆರಳು
ಬಗೆಬಗೆ ರತುನಂಗಳ ನಗಗಳನಿಟ್ಟು
ನಗವನೆತ್ತಿದ ಭುಜಕೆ ಬಿಗಿದ ಬಾಹುಪುರಿ ಕೆಂಪು
ನಿಗಿನಿಗಿಗುಟ್ಟುವ ಕಾಂತಿ ನಗುತಿದೆ ಬಾಲ ಭಾನುವ ||೩||

ಎಳೆಮಾವಿನ ಸೊಬಗಿನ ತಳಿರುಪೋಲುವ ಕೆಂದುಟಿ
ಸುಳಿಪಲ್ಲು ಮಂದಹಾಸವು ನಳಿನಳಿದಾಕ್ಷ
ಥಳಥಳಿಪ ಕುಂಡಲವು ಪೊಳೆವ ನಾಸಿಕಲಲಾಟ
ಚೆಲುವ ಹುಬ್ಬು ಕಸ್ತೂರಿಯ ತಿಲಕ ಒಪ್ಪುವ ಮುಖದಿ ||೪||

ಕೋಟಿಹೊನ್ನು ಬಾಳುವ ಕಿರೀಟವಿಟ್ಟು ಕಡೆಗಣ್ಣ
ನೋಟದಿಂದ ತರುಣೇರ ವೋಟಿ ಮಾಡುತ
ಚಾಟುಮಾತುಗಳಾಡುತ ಪೊಟ್ಟನಂತೆ ತಿರುಗಿದರೆ
ನೀಟಲ್ಲವೊ ನಿನಗಿದು ಪಾಟಲಾಧರನೆ ಕೇಳು ||೫||

ಬಿಂಕದಿಂದ ಎರಡು ಕರದಿ ಶಂಖ ಚಕ್ರವ ಪಿಡಿದು
ಅಂಕಿತ ವೇಣುನೂದುತ ಶಂಕೆ ಇಲ್ಲದೆ
ಮಂಕು ಮಾಡುತ ಬಾಲೇರ ಪಂಕಜಾಕ್ಷ ಸುಳಿದರೆ
ಮಂಕುಗಾರನೆಂದು ನಿನ್ನ ಅಂಕಿತ ಮಾಡುವರಲ್ಲೋ ||೬||

ಮಂಗಳಮೂರುತಿ ಮುಂಚೆ ಶೃಂಗಾರಗಳನೆ ಮಾಡಿ
ಪೊಂಗೊಳಲನೂದುತ ಶ್ರೀರಂಗ ಸುಳಿದರೆ
ಹೆಂಗಳ ರಂಭೇರೊಂದಾಗಿ ಕಂಗಳಿಡಲು ಉನ್ನಂತ
ರಂಗವಿಠಲಗಲದಿರೋ ಹಿಂಗದೆ ನರಸಿಂಗನೇ ||೭||
***


ದೃಷ್ಟಿ ತಾಕೀತೋ ಬೀದಿ ಮೆಟ್ಟಬ್ಯಾಡವೋಸೃಷ್ಟಿಯ ನಾರಿಯರೆಲ್ಲ ಕಣ್ಣಿಟ್ಟು ಹೀರುವರೋ ನಿನ್ನ ಪ

ಪುಟ್ಟ ಪದಕಮಲದಿ ಮೆಟ್ಟಿ ರತುನ ಪಾದುಕಾಇಟ್ಟ ಕಿರುಗೆಜ್ಜೆ ಪೆಂಡ್ಯೆ ದಿಟ್ಟತನದಿಘಟ್ಟಿ ಸಾಸಿರ ಬಾಳುವ ಪಟ್ಟೆಯನೆ ಬಿಗಿದುಟ್ಟು ಮೇಗಿಲ್ಲದ ಬೆಲೆಯಾದ ಪಟ್ಟದುಡುದಾರವಿಟ್ಟು 1

ಸಿರಿಯಿರುವ ಉರದಲ್ಲಿ ಪರಿಮಳ ಗಂಧವ ಪೂಸಿಪರಿಪರಿ ಪದಕ ಮುತ್ತು ಸರ ವೈಜಯಂತಿಕೊರಳ ಕೌಸ್ತುಭದ ಕಾಂತಿ ನಿರುಪಮ ಶ್ರೀವತ್ಸಲಾಂಛನ ಸರಿಗೆ ತಾಳಿ ಪದಕವು ಸೇರಿದ ಮುತ್ತಿನ ಜಲ್ಲೆ 2

ಉಗುರ ಗೋರಂಟಿ ಛಾಯಾ ಚಿಗುರು ಪೋಲುವ ಬೆರಳುಬಗೆಬಗೆ ರತುನಂಗಳ ನಗಗಳನಿಟ್ಟುನಗವನೆತ್ತಿದ ಭುಜಕೆ ಬಿಗಿದ ಬಾಹುಪುರಿ ಕೆಂಪುನಿಗಿನಿಗಿಗುಟ್ಟುವ ಕಾಂತಿ ನಗುತಿದೆ ಬಾಲಭಾನುವ 3

ಎಳಮಾವಿನ ಸೊಬಗಿನ ತಳಿರುಪೋಲುವ ಕೆಂದುಟಿಸುಳಿಪಲ್ಲು ಮಂದಹಾಸವು ನಳಿನದಳಾಕ್ಷಥಳಿಥಳಿಪ ಕುಂಡಲವು ಪೊಳೆವ ನಾಸಿಕ ಲಲಾಟಚೆಲುವ ಪುಬ್ಬು ಕಸ್ತೂರಿಯ ತಿಲಕ ಒಪ್ಪುವ ಮುಖದಿ 4

ಕೋಟಿ ಹೊನ್ನು ಬಾಳುವ ಕಿರೀಟವಿಟ್ಟು ಕಡೆಗಣ್ಣನೋಟದಿಂದ ತರುಣೇರ ಪೋಟಿ ಮಾಡುತಚಾಟು ಮಾತುಗಳಾಡುತ ಪೊಟ್ಟನಂತೆ ತಿರುಗಿದರೆನೀಟಲ್ಲವೋ ನಿನಗದು ಪಾಟಲಾಧರನೆ ಕೇಳು 5

ಬಿಂಕದಿಂದ ಎರಡು ಕರದಿ ಶಂಖ ಚಕ್ರವ ಪಿಡಿದುಅಂಕಿತ ವೇಣುನೂದುತ ಶಂಕೆ ಇಲ್ಲದೆ ಮಂಕು ಮಾಡುತ ಬಾಲೇರ ಪಂಕಜಾಕ್ಷ ಸುಳಿದರೆÉಮಂಕುಗಾರನೆಂದು ನಿನ್ನ ಅಂಕಿತ ಮಾಡುವರಲ್ಲೋ 6

ಮಂಗಳಮೂರುತಿ ಮುಂಚೆ ಶೃಂಗಾರಗಳನೆ ಮಾಡಿಪೊಂಗೊಳಲನೂದುತ ಶ್ರೀರಂಗ ಸುಳಿದರೆಹೆಂಗಳ ರಂಭೇರೊಂದಾಗಿ ಕಂಗಳಿಡಲು ಉನ್ನಂತರಂಗವಿಠಲಗಲದಿರೋ ಹಿಂಗದೆ ನರಸಿಂಗನೇ 7
****