Showing posts with label ದೇವಾ ನಿನ್ನ ಚರಣವನ್ನು ಮರೆಯಲಾರೆನು shanti. Show all posts
Showing posts with label ದೇವಾ ನಿನ್ನ ಚರಣವನ್ನು ಮರೆಯಲಾರೆನು shanti. Show all posts

Sunday, 1 August 2021

ದೇವಾ ನಿನ್ನ ಚರಣವನ್ನು ಮರೆಯಲಾರೆನು ankita shanti

 ..

kruti by shantibai dasaru ಶಾಂತಿಬಾಯಿ ದಾಸರು


ದೇವಾ ನಿನ್ನ ಚರಣವನ್ನು ಮರೆಯಲಾರೆನು

ಮರೆಯದಂತೆ ಕರುಣದಿ ಎನ್ನಾ ಸ್ಮರಣೆಯೊಳಿಡು ನೀನು ಪ


ಪಂಕಜಾಂಬಕಿ ಲಕ್ಞ್ಮೀರಮಣಾ ರಂಗರಕ್ಷಕಾ

ಶಂಕಾನಾಶ ಸರ್ವಾಧಾರ ಶಂಕರಸಖಾ

ಶಂಖ ಚಕ್ರಗಳ ಕರದೊಳ್ ಪಿಡಿದ ಪಂಕಜನೇತ್ರನೇ 1


ತನ್ನವರಿಂತೆಂದೆನಿಸಿ ಕೊಂಡು ಅನ್ಯರ ಭಜಿಪುದು

ನಿನ್ನ ಮತವೇ ದೇವಾ ನಾನು ಬನ್ನ ಬಡುವುದು

ಮುನ್ನ ಎನ್ನನು ಪೊರೆವರ್ಯಾರೊ ಪನ್ನಗಶಯನನೇ 2


ಅಂತು ಇಂತೆನಲೊಲ್ಲೆ ದೇವಾ ಅನಂತ ಮಹಿಮೆಯಾ

ಸಂತಸಾಧು ಸಾಧ್ಯನಾಗಿಹ ಅಂತರಾತ್ಮನಾ

ಚಿಂತೆ ಭ್ರಾಂತಿಗಳ ತೊರೆದು ಗುರುವರ ಶಾಂತಿ ಪಾಲಿಪನೇ 3

***