Showing posts with label ಧನ್ಯ ಧನ್ಯಾ ಜಗದೊಳವನೇ ಧನ್ಯ ಧನ್ಯಾ ಧನ್ಯ ಧನ್ಯ ಅವ ತನ್ನೊಳು gurumahipati. Show all posts
Showing posts with label ಧನ್ಯ ಧನ್ಯಾ ಜಗದೊಳವನೇ ಧನ್ಯ ಧನ್ಯಾ ಧನ್ಯ ಧನ್ಯ ಅವ ತನ್ನೊಳು gurumahipati. Show all posts

Wednesday, 1 September 2021

ಧನ್ಯ ಧನ್ಯಾ ಜಗದೊಳವನೇ ಧನ್ಯ ಧನ್ಯಾ ಧನ್ಯ ಧನ್ಯ ಅವ ತನ್ನೊಳು ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು


ಧನ್ಯ ಧನ್ಯಾ | ಜಗದೊಳವನೇ | ಧನ್ಯ ಧನ್ಯಾ | ಧನ್ಯ ಧನ್ಯ ಅವ ತನ್ನೊಳು ಸ್ವಹಿತದ | ಕಣ್ಣದೆರೆದು ಗುರುವಿನ್ನರಿತಿಹ ನಿಜ | ಸಣ್ಣ ದೊಡ್ಡದರೊಳು ಘನ್ನವ ನೋಡುತಾ | ಮನ್ನಿಸಿ ಶಾಂತಿಯಲಿನ್ನಿಳಿದವನೇ 1 

ವಾದಗಳಳಿದು ಕ್ರೋಧವ ಕಳೆದು | ಸಾಧುರ ಕಾಣುತ ಪಾದಕ ಯರಗುತ | ಮೋದವ ಕುಡುವ ಬೋಧವ ಕೇಳುವ | ಸಾಧನ ನಾಲ್ಕರ ಹಾಧ್ಹಿಡಿದವನೇ 2 

ಎಲ್ಲರಿಗೇ ಕಿರಿದೊಳ್ಳಿತೆನಿಸಿ | ಬಲ್ಲತನದ ಗರ್ವೆಲ್ಲವ ತ್ಯಜಿಸಿ | ಸಿರಿ ಫಲ್ಲನಾಭನ ಪದ | ದಲ್ಲೆವೆ ಮನರತಿ ನಿಲ್ಲಿಸಿದವನೇ 3 

ಹಂಬಡೆಡಂಬಕ ನೊಬ್ಬರಕೂಡದೇ | ಒಬ್ಬರು ಹೊಗಳಿದರುಬ್ಬದೆ ಮನದಲಿ | ನಿಬ್ಬರ ಮಾತಿಗೆ ಉಬ್ಬಸಗೊಳ್ಳದೇ | ಕೊಬ್ಬಿದ ಹಮ್ಮುವ ಲೆಬ್ಬಿಸಿದವನೇ 4 

ಒಂದೇ ನಿಷ್ಠಿಯು ಒಂದೇ ಮಾರ್ಗದಿ | ದಂದುಗ ವೃತ್ತಿಗಳೆಂದಿಗೆ ಹೊಂದದೆ | ತಂದೆ ಮಹಿಪತಿ ನಂದನ ಸಾರಿದ | ಬಂದದ ಸಾರ್ಥಕದಿಂದಿದ್ದವನೇ 5

****