ಧನ್ಯ ಸತ್ಸಂಗ ಎನ್ನೊಳು ಹೊಳೆಯಿತು ಘನಲಿಂಗ pa
ನೋಡಿದವನ ನೋಟ ಮಾಡಿತೆನ್ನೊಳು ಜೀವ ಶಿವಕೂಟ ನೀಡಿದಾಭಯದೂಟ ಗೂಢಗುರುತವಾಯಿತು ನೀಟ 1
ಹೇಳಿದವನ ಮಾತು ಹೊಳೆಯುವ ಸುಪ್ಪಾಣಿಯ ಮುತ್ತು ತಿಳಿಯಿತೆನ್ನೊಳು ವಸ್ತು ಅಳಿಯಿತು ಜನ್ಮ ಮೃತ್ಯು 2
ಸತ್ಸಂಗವ ಕೂಡಿ ಪತಿತಪಾವನವಾದನು ನೋಡಿ ಕ್ಷಿತಿಯೊಳು ನಿಜಗೂಡಿ ಗತಿಪಡೆದನು ಮಹಿಪತಿ ನೋಡಿ 3
***