Showing posts with label ಧನ್ಯನೋ ಶೇಷಗಿರಿದಾಸ ನೀನೂ ನಿತ್ಯ vijaya vittala. Show all posts
Showing posts with label ಧನ್ಯನೋ ಶೇಷಗಿರಿದಾಸ ನೀನೂ ನಿತ್ಯ vijaya vittala. Show all posts

Thursday, 17 October 2019

ಧನ್ಯನೋ ಶೇಷಗಿರಿದಾಸ ನೀನೂ ನಿತ್ಯ ankita vijaya vittala

ಧನ್ಯನೋ ಶೇಷಗಿರಿದಾಸ ನೀನೂ
ನಿತ್ಯ ಪ

ಮುಂಗೈಯ ಮ್ಯಾಲಿನ ಗಿಳಿ ಹಾರಿಹೋದಂತೆ
ರಂಗ ಮಧ್ವನ ಸ್ಮರಣೆ ಮಾಡಿಕೊಳುತ
ಮಂಗಳಾಂಗನಾಗಿ ಸ್ವರ್ಗಸ್ಥನಾದಿ ಕ್ಷಣ
ಭಂಗುರವೆಂಬ ಪ್ರಮಾಣ ಸಿದ್ಧಿಸಿತು ಗಡ 1

ಸತ್‍ಶಿಷ್ಯನೆಂದೆನಿಸಿಕೊಂಡದಕೆ ಎನ್ನ ಮ
ನೋತ್ಸಾಹ ಮಾತ್ರ ಬಂದಾಗಲಿಲ್ಲಾ
ವತ್ಸ ಕೇಳು ಉಪಸರ್ಗ ಕೂಡಿದ ನಾಭಿ
ತತ್ಸಮಾನಾಯಿತೊ ಇಂದಿನಾರಭ್ಯವೂ2

ಒಂದೆ ಪ್ರವಾಹದೊಳು ಈಸು ಬೀಳಲು ಸುಳಿ
ಯಿಂದ ಹಿಂದಕೆ ಒಬ್ಬನಿಂದಂತೇವೆ
ಇಂದು ಎನಗಾಯಿತೊ ಭೂಮಿಯೊಳಗೆ ಋಣಾನು-
ಬಂಧ ಇಂತಿರಲಿಕ್ಕೆ ಯತ್ನ ಒಬ್ಬರದಿಲ್ಲ3

ಪರಿಣಾಮಕೆ ನಿನಗೆ ಸಾನುಕೂಲಾವಾಗಿ
ಅನಿಲದೇವನು ಒಲಿದು ಹರಿಯ ಕೂಡಾ
ಪ್ರಣಮಪೂರ್ವಕದಿಂದ ಪಂಚತ್ವ ಐದಿದೆ ಸಾ-
ಧನ ಪೂರ್ತಿಕಾಲ ಎಳ್ಳನಿತು ಉಳದಿಪ್ಪದೊ 4

ವಿಧಿ ಸಂವತ್ಸರ ಭಾದ್ರಪದ ಶುಕ್ಲದ ಭಾನು
ಬಿದಿಗೆಯಲಿ ಪ್ರವರ ಗೌತಮ ಸಂಗಮಾ
ನಿಧಿಯಲಿ ವಿಜಯವಿಠ್ಠಲನಂಘ್ರಿಯುಗಳವನು
ಹೃದಯದಲಿ ಇಟ್ಟು ದೇಹವ ತ್ಯಾಗಮಾಡ್ದೆ 5
**********