ಕಾಖಂಡಕಿ ಶ್ರೀ ಕೃಷ್ಣದಾಸರು
ಧುಮ್ಮಸಾಲೆಯ ನೋಡಿ ಧುಮ್ಮಸಾಲೆಯಾ ಪ
ಧುಮ್ಮಸಾಲೆಯ ನೋಡಿ ಘಮ್ಮವಾದ ಪ್ರಾಣಿಗಳು | ತಮ್ಮ ಸುದ್ದಿ ತಮಗಿಲ್ಲಾ ಹಮ್ಮಿನಿಂದಲಿ | ಧಿಮ್ಮಹಿಡಿದು ಭವದೊಳು ಸುಮ್ಮನೆವೆ ಕೆಟ್ಟು ಹೋದ | ಗ್ಯಾದರೆಯು ಪರಬೊಮ್ಮನಾಮ ನೆನೆಯಿರೋ 1
ವಿದ್ಯೆಯಿಂದ ವಾದಿಸುತ ಮುದ್ದಿಯಿಂದ ಕಣ್ಣು ಮುಚ್ಚಿ | ಸದ್ಯ ಶಕ್ತಿ ಯೌವನದಿ ಗುದ್ದಿ ಹೆಟ್ಟು ತಾ | ಪರಿ ನಿಜ | ಬುದ್ಧಿ ಹೋಗಾಡಿಸಿ ಅನಿರುದ್ಧನನ ಮರೆತಿರೋ 2 ಒಂದು ಕವಡಿಯಲಾಭ ತಮಗೆ ಹೊಂದದಿದ್ದರೆ ಸರಿ | ಬಂದು ನಿಂದು ಒಳ್ಳೆವರಾ ನಿಂದೆ ಮಾಡುತಾ | ಇಂದು | ಕೂಪ ಲಿಟ್ಟರೋ 3
ಉಡಗಿ ಬಿಟ್ಟು ಹುಡಿಯಹಚ್ಚಿ ಜಡಿಯಬಿಟ್ಟು ಸಿದ್ಧಗಾಗಿ | ಪೊಡವಿಲಿನ್ನು ಲಾಭಾ ಲಾಭಾ ನುಡಿಯ ಹೇಳುವಾ | ತುಡುಗರಿಗೆ ಹೋಗಿಕಾಲ ವಿಡಿದು ಗೋಂದಲ್ಹಾಕುವರು | ಕಡಲಶಯನನ ಭಜಿಸದೆವೆ ಅಡಲು ಬಿಟ್ಟು ಹೋದರೋ 4
ಸಿರಿಯ ಸುಖಗೀಪರಿ ಪರಿಯ ವೃತ ತಪದಿಂದಾ | ಚರಿಸಿ ನೋಡು ಕಣ್ಣು ವಿದ್ದು ಕುರುಡರಾದರೋ | ಗುರುಮಹಿಪತಿ ಸ್ವಾಮಿ ಚರಣ ನಂಬಿಯಚ್ಚರದಿ | ನಿರಪೇಕ್ಷ ಭಕ್ತಿಯಿಂದಾ ತರಣೋಪಾಯ ನೋಡರೋ 5
****