Showing posts with label ನಂದಕಂದನ ನೋಡಿರೇ ಅಂದದಿ ಛಂದದಿ ಪಾಡಿರೇ gurumahipati. Show all posts
Showing posts with label ನಂದಕಂದನ ನೋಡಿರೇ ಅಂದದಿ ಛಂದದಿ ಪಾಡಿರೇ gurumahipati. Show all posts

Wednesday, 1 September 2021

ನಂದಕಂದನ ನೋಡಿರೇ ಅಂದದಿ ಛಂದದಿ ಪಾಡಿರೇ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ನಂದಕಂದನ ನೋಡಿರೇ| ಅಂದದಿ ಛಂದದಿ ಪಾಡಿರೇ ಪ 


ದುಡುದುಡುಕೆಂದು ಕಡೆಯಲು ಗೋಪಿ| ಒಡನೊಡನಾಲಿಸಿ ಶಬ್ದವಾ|| ದುಡುದುಡು ಬಂದ ಕಡಗೋಲ ಪಿಡಿದು ಬಿಡದೆವೆ ಬೆಣ್ಣೆಯ ಬೇಡುವಾ1 

ಅಂದುಗೆ ಗೆಜ್ಜೆಗಳಾ| ಘಿಲು ಘಿಲುಕೆಂದು ನುಡಿಸುವಾ| ಎಳೆಯಳೆಗೆಳೆರ ಮೇಳದಲಾಡಿ| ನಲಿನಲಿದಾಡುತಲೊಪ್ಪುವಾ 2 

ಅಚ್ಚರಿ ಬಗೆಯಲಿ ಗುರುಮಹಿಪತಿ ಪ್ರಭು ಸಚ್ಚರಿತಾಮೃತ ಬೀರುವಾ|| ಪಟ್ಟದ ಬೊಂಬೆಯ ನಿಚ್ಚಳ ಭಾಸುವ| ಅಚ್ಯುತನಾಕೃತಿ ದೋರುವಾ 3

***