Showing posts with label ನಂಬಿದೆ ನಾನಿನ್ನ ಚರಣವನಂಬಿಗ ಅಂಬೆಗಳ ಸುತನೆ ಕೋ ಬ್ಯಾಗಂಬಿಗ vijayaramachandra vittala. Show all posts
Showing posts with label ನಂಬಿದೆ ನಾನಿನ್ನ ಚರಣವನಂಬಿಗ ಅಂಬೆಗಳ ಸುತನೆ ಕೋ ಬ್ಯಾಗಂಬಿಗ vijayaramachandra vittala. Show all posts

Friday, 6 August 2021

ನಂಬಿದೆ ನಾನಿನ್ನ ಚರಣವನಂಬಿಗ ಅಂಬೆಗಳ ಸುತನೆ ಕೋ ಬ್ಯಾಗಂಬಿಗ ankita vijayaramachandra vittala

 ..

Kruti by ವಿಜಯರಾಮಚಂದ್ರ ವಿಠಲ ದಾಸರು mysore kattemane 


ನಂಬಿದೆ ನಾನಿನ್ನ ಚರಣವನಂಬಿಗ

ಅಂಬೆಗಳ ಸುತನೆ ಕೋ ಬ್ಯಾಗಂಬಿಗ ಪ


ಇಂಬಾಗಿ ದಡ ಸೇರಿಸೆನ್ನನೇನಂಬಿಗ

ತುಂಬಿ ನದಿ ಸೂಸುತಲಿದೆ ನೋಡಂಬಿಗ ಅ.ಪ.


ಕರ್ಮವೆಂಬ ಪ್ರವಾಹವ ನೀ ನೋಡಂಬಿಗ

ಚರ್ಮದಿಂದೇಳು ಹೊದ್ದಿಕಿ ಅಂಬಿಗ

ಮರ್ಮ ಒಂಭತ್ತು ರಂಧ್ರ ಉಂಟಂಬಿಗ

ಶರ್ಮವಿದಕೆ ಕಾಯದ್ಹರಿಗೋಲಂಬಿಗ 1


ಆಳ ಬಹಳ ಗೊತ್ತಾಗದಂಬಿಗ

ಶೆಳವು ಘನ ಉಳ್ಳುಹುದು ನೋಡಂಬಿಗ

ಸುಳಿಗಾಳಿಗೆ ಸಿಗಿಸದಿರೊ ಅಂಬಿಗ

ಬಳಸಿ ಕೊಂಡೊಯ್ಯೋದು ಒಳ್ಳೇದೆ ಅಂಬಿಗ 2


ಸಂಚಿತಾಪ್ತಿ ಇವರೊಳುಂಟಂಬಿಗ

ಮಿಂಚಿ ಭಾರ ಜಡಿಯೋದು ನೀ ನೋಡಂಬಿಗ

ವಂಚಕ ಮಾತು ರಾಗವು ಹೆಚ್ಚಂಬಿಗ

ಚಂಚಲಗೊಂಡು ಭ್ರಮಿಸೋದು ಕಾಣಂಬಿಗ 3


ಆಶಾಜಲ ಮೇಲೆ ಮೇಲೆ ಬರುವುದಂಬಿಗ

ಮೋಸ ಮಾಡುವುದೇನೊ ಕೊನೆಗೆ ಅಂಬಿಗ

ಪೊಸ ಪೊಸ ಕಾಮತೆರೆ ತುಂಬಾಯಿತಂಬಿಗ

ಲೇಶವಾದರು ಬತ್ತದು ನೋಡಂಬಿಗ4


ಅಷ್ಟ ಆನೇ ಒಳಗಿಟ್ಟುಕೊಂಡಿಹುದಂಬಿಗ

ಹುಟ್ಟು ಹಾಕೋದು ಬಿಟ್ಟು ಜಲ್ಲೆ ಕೊಳ್ಳಂಬಿಗ

ಬೆಟ್ಟ ಆರಕ್ಕೆ ಸಿಕ್ಕಿಸದೆ ನೋಡಂಬಿಗ

ನೆಟ್ಟ ನಡುವಿನ ಪಥದಿ ಒಯ್ಯೋ ಅಂಬಿಗ 5


ಸುತ್ತ ಕಾರ್ಮುಗಿಲು ಬಂತಲ್ಲೊ ಅಂಬಿಗ

ಹತ್ತು ಹನಿಗಳು ಬಿತ್ತು ನೋಡಂಬಿಗ

ಎತ್ತಿ ನಡೆಸೋದು ಶಕ್ತಿ ನಿನ್ನದು ಕಾಣಂಬಿಗ

ಹತ್ತಿಸೊ ಭಕ್ತಿದಡಕಿನ್ನಂಬಿಗ 6


ಮರಕಟಿ ಸೇರಿಹದಿದರೊಳಗಂಬಿಗ

ಕರೆಕರೆಗೆ ಗುರಿ ಮಾಡೊದಿದೆ ಅಂಬಿಗ

ಸರಿಯಾಗಿ ನಡೆಸೊ ಇನ್ನಾದರಂಬಿಗ

ವರದವಿಜಯ ರಾಮಚಂದ್ರವಿಠಲ ನೀನಂಬಿಗ 7

***