Showing posts with label ನಂಬಿದ್ಯಾ ಮನವೇ ನಂಬಿದ್ಯಾ krishnavittala. Show all posts
Showing posts with label ನಂಬಿದ್ಯಾ ಮನವೇ ನಂಬಿದ್ಯಾ krishnavittala. Show all posts

Monday, 2 August 2021

ನಂಬಿದ್ಯಾ ಮನವೇ ನಂಬಿದ್ಯಾ ankita krishnavittala

ನಂಬಿದ್ಯಾ ಮನವೇ ನಂಬಿದ್ಯಾ ಪ


ನಂಬಿದ್ಯ ಮನವೆ ಕೊಂಡಾಡಿದ್ಯ

ಆನಂದ ತೀರ್ಥರ ಮತವೆಸತ್ಯವೆಂದು ಅ.ಪ


ಇಂದಿರೆ ರಮಣನೆ ಪರದೈವವೆಂದು

ಬಂಧನಾದಿ ಅಷ್ಟಕರ್ತೃತ್ವ ಆತನದೆಂದು

ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು

ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1

ನಾರಾಯಣನೆ ಸರ್ವೋತ್ತುಮನು ಎಂದು

ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು

ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು

ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2

ಸಾಕಾರಸರ್ವೇಶ ನಿರ್ವಿಕಾರ ನೆಂದು

ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು

ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು

ಅಕಳಂಕ ಚರಿತ ಅನಾದಿ ಅಜ ಅಪ್ರಮೇಯನೆಂದೂ3

ವೇದಗೋಚರ ತಾವೇದಾತೀತನೆಂದು

ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು

ಮಧುಸೂಧನನು ಚಿನ್ಮಯ ವಪುಷನೆಂದು

ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4

ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು

ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು

ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ

ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5

ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು

ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು

ಪರಮ ಪುರುಷನೆ ಅಪವರ್ಗ ಗತಿದಾಯಕನೆಂದೂ

ಮಾರಮಣನ ಪಾದ ಭಜನೆಯೆ ಸಾರವೆಂದೂ 6

ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ

ಕಾರ್ಯಗಳನು ಮಾಡಿ ಮಾಡಿಸುವನೆಂದು

ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ

ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7

ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು

ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು

ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು

ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8

ಹಂಸಾದಿ ಹದಿನೆಂಟು ರೂಪಗಳ ಧರಿಸಿ

ಅಂಶಾಂಶರೂಪದಿ ಚೇತನಾ ಚೇತನ ದೊಳ

ಹೊರಗೆ ವ್ಯಾಪಿಸಿ

ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ

ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9

ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು

ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ

ಕೃತಿ ಪತಿಯು ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ

ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10

ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು

ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು

ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು

ಚತುರಾನನಾದಿಗಳಿಗೆಲ್ಲಾ ಎಂದು11

ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ

ಗುಣನಿಧಿ ಅನಾದಿ ಅಪರೋಕ್ಷ ಪ್ರಭುವು

ಅಣು ಮಹದ್ಘನ ರೂಪ ಚರಿತ ಭಾರತೀಶ

ವಾಣೀ ಪತಿಯ ಪದಾರ್ಹ ವಾತದೇವನು ಎಂದು 12

ಹನುಮ ಭೀಮ ಮಧ್ವ ಮೂರಾವತಾರದ ದೇವ

ಅನುಪಮ ಬಲನಿಸ್ಸೀಮ ಪುರುಷತೇಜ

ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ

ಗುಣಕರ್ಮಗಳುಣೀಸೀ ನಿಜಗತೀ

ಹರಿಯಾಜ್ಞೆಯಂತೀವನೆಂದೂ 13

ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು

ಆತನೇಲೋಕಕ್ಕೆಲ್ಲ ಗುರವು ಎಂದು

ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು

ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14

ಹರಿಯ ಮತವೆ ಹನುಮನ ಮತವು ಎಂದು

ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ

ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ

ತಾರತಮ್ಯ ಪಂಚ ಭೇದವು ಸತ್ಯವೆಂದು 15

ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು

ಮುರಾರಿಯ ಒಲುಮೆಗೆ e್ಞÁನಯುತಭಕ್ತಿಯೆ ಸಾಧನವೆಂದು

ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು

ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16

ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು

ಗುರುವಿನ ಕರುಣವೆ e್ಞÁನಕ್ಕೆ ಕಾರಣವೆಂದು

ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು

ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17

ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು

ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು

ಜೀವ ಜಡಕೆ ಭೇದ ಈ ಪರಿ ಪಂಚ ಭೇದವೆಂದು

ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18

ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು

ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು

ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು

ಅರವಿಂದನಾಭಗೆ ಸರ್ವರು ಸದಾದಾಸರೆಂದು 19

ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು

ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು

ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು

ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20

ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ

ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು

ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ

ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21

****