Showing posts with label ನಂಬುಗೆ ಪಡಿಯಿರೋ ದೇವರ ದೇವನಾ gurumahipati. Show all posts
Showing posts with label ನಂಬುಗೆ ಪಡಿಯಿರೋ ದೇವರ ದೇವನಾ gurumahipati. Show all posts

Wednesday 1 September 2021

ನಂಬುಗೆ ಪಡಿಯಿರೋ ದೇವರ ದೇವನಾ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ನಂಬುಗೆ ಪಡಿಯಿರೋ ದೇವರ ದೇವನಾ ಪ 


ಧಾಮ ಸಾರ್ವಭೌಮ ತಾಮರಸ ಸಖ ಆ ಮಹಾಕುಲೋದ್ದಾಮ ಆಹವ ಭೀಮ| ಸ್ವಾಮಿ ಸಕಲರ ಕಾಮಿತಾರ್ಥವ ನೇನಿ ಮುನಿಜನ ಪ್ರೇಮಿ| ಚರಿತ ನಿಸ್ಸೀಮಿಯಾ1 

ಧಾಟಿಯಲಿ ನರನಾಟಕ ವಿಡಿದ ಆಟವಾಡಲು ನೀಟಾ| ಕೋಟಿ ಕೋಟಿ ನಿಶಾಟ ದರ್ಪೋಚ್ಚಾಟ ಮಾಡಿದ ಸ್ಪೋಟಾ| ನೀಟ ಶರಣ ಮುಕುಟಿಗಿತ್ತನು ಪೀಠಾ| ಧೀಟ ಶ್ರೀ ಜಟೆ ಜೂಟ ವಂದಿತ ಪಾಟರಹಿತ ಸ್ಪರಾಟನಾ 2 

ಅಂದು ಇಂದೇ-ನೆಂದಿಗಾದರ ವಂದೇ ದಯದಿಂದ| ಛಂದ ಛಂದದ-ಲಿಂದ ಭೋಕ್ತರ ಬಂಧು ಭಕ್ತರ ವೃಂದ| ಸುಂದರಾನನ ಕುಂದರದನ ಸುಮಂದ ಹಾಸಾನಂದ| ಇಂದಿರೈರಸ ತಂದೆ ಮಹಿಪತಿ ಕಂದ ಪ್ರೀಯ ಮುಕುಂದನಾ 3

***