Showing posts with label ನಡಿ ನೀರೇ ಪೋಪಾ ದೇವಿ ಇದ್ದೆಡೆಗೆ ಕಡು ಕೋಪವ್ಯಾಕ gurumahipati. Show all posts
Showing posts with label ನಡಿ ನೀರೇ ಪೋಪಾ ದೇವಿ ಇದ್ದೆಡೆಗೆ ಕಡು ಕೋಪವ್ಯಾಕ gurumahipati. Show all posts

Wednesday, 1 September 2021

ನಡಿ ನೀರೇ ಪೋಪಾ ದೇವಿ ಇದ್ದೆಡೆಗೆ ಕಡು ಕೋಪವ್ಯಾಕ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ನಡಿ ನೀರೇ ಪೋಪಾ ದೇವಿ ಇದ್ದೆಡೆಗೆ| ಕಡು ಕೋಪವ್ಯಾಕ ಶ್ರೀರಮೆ ಕೂಡ ಎನಗೆ ಪ 


ಫುಲ್ಲ ಲೋಚನೆ ಕುಂದರದನೆ ಸುಫಣಿ ವೇಣಿ| ಮಲ್ಲಿಕಾ ಮಂದಸ್ಮಿತೆ ಚಲ್ಪಕದಪು| ಬಿಲ್ಲು ಕಾಮನ ಸೋಲಿಪ ಭ್ರೂಲತೆಯುಳ್ಳ| ಸಲ್ಲಲಿತಾಂಗಿಯಾವಾಗ ಕಂಡೆಪೆನೆ 1 

ಹುಣ್ಣಿಮೆ ಚಂದ್ರನ ಮಂಡಲ ಪೊಳೆವಾ|ಪೊಂ| ಬಣ್ಣವದನೆ ಮಹಾಸಿಂಹನ ಜರೆವಾ| ಸಣ್ಣ ನಡುವಿನಿಂದೊಪ್ಪುವ ಸಿರಿಯನು| ಕಣ್ಣಾರೆನೋಡಿ ಮತಾಡುವೆ-ನೇಳೆ 2 

ಬರಬಾರದು ದೇವಿಯಗಲಿ ಬಂದರ| ಸ್ಥಿರವಾಗದು ಅರಫಳಿಗೆನ್ನ ಮನಸು| ಗುರುಮಹಿಪತಿ ಸುತ ವರದ ದೇವತೆಯಾಗಿ| ಧರೆಯೊಳು ಮೆರವಾ ಶ್ರೀ ಲಕ್ಷೀಯ ತೋರೆ3

****