Showing posts with label ನಾನಾ ವೇಷಗಳಿನ್ನು ನಿನಗ್ಯಾಕೊ ಹರಿಯೆ rajesha hayamukha. Show all posts
Showing posts with label ನಾನಾ ವೇಷಗಳಿನ್ನು ನಿನಗ್ಯಾಕೊ ಹರಿಯೆ rajesha hayamukha. Show all posts

Thursday 5 August 2021

ನಾನಾ ವೇಷಗಳಿನ್ನು ನಿನಗ್ಯಾಕೊ ಹರಿಯೆ ankita rajesha hayamukha

 ..

kruti by ವಿಶ್ವೇಂದ್ರತೀರ್ಥರು vishwendra teertharu sode mutt


ನಾನಾ ವೇಷಗಳಿನ್ನು ನಿನಗ್ಯಾಕೊ ಹರಿಯೆ

ನಿನ್ನ ಭಕ್ತರು ನಿನ್ನ ತಿಳಿಯದೆ ಬಿಡರು ಪ


ಮೀನಾಗಿ ಜಲದೊಳು ತಿರುಗುವದ್ಯಾಕೊ

ಚಾರಣನೆಂದೆನಿಸಿ ಭಾರವ ಪೊತ್ತುದ್ಯಾಕೊ 1


ಹಂದ್ಯಾಗಿ ದಿತಿಜನ ಬಡಿದೆ ನೀನ್ಯಾತಕೋ

ಕಂದನ ಪೊರೆಯೆ ಕಂಬದಿ ತೋರಿದ್ಯಾಕೊ 2


ವಟುವಾಗಿ ಭೂಮಿಯ ಬೇಡಿದೆ ಏತಕೊ

ಹಟವು ರಾಯರ ಮೇಲೆ ನಿನಗ್ಯಾಕೆ ಬೇಕೋ 3


ಮಲತಾಯಿ ನುಡಿಗಾಗಿ ವನವಾಸ ನಿನಗ್ಯಾಕೊ

ಬಲದಿ ತಂದೆಯ ಬಂಧ ಬಿಡಿಸಿದ್ದು ಸಾಕೊ 4


ರಾಜೇಶ ಹಯಮುಖ ಬತ್ತಲೆ ನಿಂತೆ ಏಕೊ

ತೇಜಿಯನೇರ್ದು ತೋರುವ ಶೌರ್ಯ ಸಾಕೊ 5

***