Showing posts with label ನಾನೇ ಸಜ್ಜನನಾದಡೆ ಇಂಥ ಹೀನ ವಿಷಯಗಳಿಗೆ rangavittala. Show all posts
Showing posts with label ನಾನೇ ಸಜ್ಜನನಾದಡೆ ಇಂಥ ಹೀನ ವಿಷಯಗಳಿಗೆ rangavittala. Show all posts

Wednesday, 11 December 2019

ನಾನೇ ಸಜ್ಜನನಾದಡೆ ಇಂಥ ಹೀನ ವಿಷಯಗಳಿಗೆ ankita rangavittala

ನಾನೇ ಸಜ್ಜನನಾದಡೆ ಇಂಥ ಹೀನ ವಿಷಯಗಳಿಗೆರಗುವೆನೇನಯ್ಯ ಪ.

ನಿರುತದಿ ಪರರ ನಿಂದಿಸುತಿಹೆನೆಗುರುಹಿರಿಯರು ಸಜ್ಜನರೆನ್ನದೆಹರಿ ಪರದೈವವೆಂದರಿತು ಭಜಿಸದೆಪರರ ವಡವೆಗಳ ಬಯಸುವೆನೇನಯ್ಯ 1

ಚಿತ್ತವ ಪುರುಷೋತ್ತಮನ ಮನದಲ್ಲಿಡದೆಉತ್ತಮರಾದವರೊಡನಾಡದೆತತ್ವ ವಿಚಾರವ ಮಾಡದೆ ನಾನು ನ್ಮತ್ತರ ಸಂಗವ ಮಾಡುವೆನೇನಯ್ಯ 2

ಹೇಯ ಶರೀರವ ಪೋಷಿಸಿಕೊಂಡುಪಾಯವ ಚಿಂತಿಸಿ ಬಳಲುವೆನುರಾಯರ ಶರಣರ ಸಲಹುವರಂಗವಿಠಲನ ಬಿಡುವೆನೇನಯ್ಯ 3
***********