..
ನಾರಾಯಣ ಎಂಬ ನಾಮದ ಬೀಜವನು ನಾಲಗೆಯಕೂರಿಗೆಯ ಮಾಡಿ ಬಿತ್ತಿರಯ್ಯ ಪ
ತನುವ ನೇಗಿಲು ಮಾಡಿ ಹೃದಯ ಹೊಲವನು ಮಾಡಿತನ್ವಿರಾ ಎಂಬ ಎರಡೆತ್ತ ಹೂಡಿಜ್ಞಾನವೆಂಬೊ ಮಿಣಿಯ ಕಣ್ಣಿ ಹಗ್ಗವ ಮಾಡಿಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ 1
ಕಾಮಕ್ರೋಧಗಳೆಂಬ ಗಿಡಗಳನು ತರಿಯಿರಯ್ಯಮದಮತ್ಸರವೆಂಬ ಪೊದೆಯ ಇರಿಯಿರಯ್ಯಪಂಚೇಂದ್ರಿಯಗಳೆಂಬ ಮಂಚಿಕೆಯ ಹಾಕಿರಯ್ಯಚಂಚಲವೆಂಬ ಹಕ್ಕಿಯ ಓಡಿಸಿರಯ್ಯ 2
ಉದಯಾಸ್ತಮಾನವೆಂಬ ಎರಡು ಕೊಳಗವ ಮಾಡಿ ಆಯುಶ್ಯದ ರಾಶಿಯನು ಅಳೆಯಿರಯ್ಯಇದು ಕಾರಣ ಕಾಗಿನೆಲೆಯಾದಿಕೇಶವನಮುದದಿಂದ ನೆನೆನೆನೆದು ಸುಖಿಯಾಗಿರಿಯ್ಯ3
***