ನಿಜವಿರಬೇಕು ಸಜ್ಜನರಿಗೆ ಒಂದು ಪ
ಅಜಜನಕಾನೆ ಈ ತ್ರಿಜಗಕೆ ಒಡೆಯನೆಂದು ಅ.ಪ
ಉದಯಾಸ್ತಮಾನ ಮಾಡುವ ವ್ಯಾಪಾರವು
ಪದುಮಾಕ್ಷ ಕೃಷ್ಣನ ಸೇವೆಯೆಂದು
ಸುದತಿಯೊಡನೆ ಕೂಡಿ ಮಧುರ ಮಾತುಗಳಾಡಿ
ಮಧುವೈರಿ ಚರಿತೆಯ ಮುದದಿ ಕೇಳುವಂಥ 1
ಮಡದಿ ಮಕ್ಕಳು ತನ್ನ ಒಡಹುಟ್ಟಿದವರೆಲ್ಲ
ಒಡೆಯನ ಅಡಿಗೆ ಸೇವಕರು ಎಂದು
ದೃಢದಿ ತಿಳಿದು ಮೃಡನೊಡೆಯನ ಪಾದವ
ಬಿಡದೆ ಭಜಿಸುವಂಥ ದೃಢ ಬುದ್ಧಿ ಎಂಬುವ2
ಮಾತಾಪಿತರು ಸುತ ಭ್ರಾತರಿಷ್ಟಾಬಂಧು
ವ್ರಾತ ರೆಲ್ಲರು ಹರಿಗೆ ದೂತರೆಂದು
ಮಾತುಳಾಂತಕ ತಂದೆಮುದ್ದುಮೋಹನವಿಠಲ
ಖ್ಯಾತಾನೆಂದು ಪ್ರೀತಿ ಪೊಂದುವುದಕ್ಕೆ 3
*********
ಅಜಜನಕಾನೆ ಈ ತ್ರಿಜಗಕೆ ಒಡೆಯನೆಂದು ಅ.ಪ
ಉದಯಾಸ್ತಮಾನ ಮಾಡುವ ವ್ಯಾಪಾರವು
ಪದುಮಾಕ್ಷ ಕೃಷ್ಣನ ಸೇವೆಯೆಂದು
ಸುದತಿಯೊಡನೆ ಕೂಡಿ ಮಧುರ ಮಾತುಗಳಾಡಿ
ಮಧುವೈರಿ ಚರಿತೆಯ ಮುದದಿ ಕೇಳುವಂಥ 1
ಮಡದಿ ಮಕ್ಕಳು ತನ್ನ ಒಡಹುಟ್ಟಿದವರೆಲ್ಲ
ಒಡೆಯನ ಅಡಿಗೆ ಸೇವಕರು ಎಂದು
ದೃಢದಿ ತಿಳಿದು ಮೃಡನೊಡೆಯನ ಪಾದವ
ಬಿಡದೆ ಭಜಿಸುವಂಥ ದೃಢ ಬುದ್ಧಿ ಎಂಬುವ2
ಮಾತಾಪಿತರು ಸುತ ಭ್ರಾತರಿಷ್ಟಾಬಂಧು
ವ್ರಾತ ರೆಲ್ಲರು ಹರಿಗೆ ದೂತರೆಂದು
ಮಾತುಳಾಂತಕ ತಂದೆಮುದ್ದುಮೋಹನವಿಠಲ
ಖ್ಯಾತಾನೆಂದು ಪ್ರೀತಿ ಪೊಂದುವುದಕ್ಕೆ 3
*********