Showing posts with label ನಿನಗಿಂತ ಕುಂದೇನೊ ನಮ್ಮಮ್ಮ ಜಯಲಕ್ಷ್ಮೀ neleyadikeshava NINAGINTA KUNDENO NAMMAMMA JAYALAKSHMI. Show all posts
Showing posts with label ನಿನಗಿಂತ ಕುಂದೇನೊ ನಮ್ಮಮ್ಮ ಜಯಲಕ್ಷ್ಮೀ neleyadikeshava NINAGINTA KUNDENO NAMMAMMA JAYALAKSHMI. Show all posts

Tuesday, 5 October 2021

ನಿನಗಿಂತ ಕುಂದೇನೊ ನಮ್ಮಮ್ಮ ಜಯಲಕ್ಷ್ಮೀ ankita neleyadikeshava NINAGINTA KUNDENO NAMMAMMA JAYALAKSHMI

 


ನಿನಗಿಂತ ಕುಂದೇನೊ ನಮ್ಮಮ್ಮ ಜಯಲಕ್ಷ್ಮೀ ಪ


ನಿನಗಿಂತ ಕುಂದೇನೋ ಸನಕಾದಿಗಳ ಸ್ವಾಮಿಮನಸಿಜನೊಡೆಯನೆ ಕನಕಗರ್ಭನ ಜನಕ ಅ


ಮಚ್ಚ್ಯಾವತಾರ ನೀನಾದರೆ - ಆಕೆಮಚ್ಚ್ಯಗಂಗಳೆ ತಾನಾದಳೊಹೆಚ್ಚಿನ ಶಂಖವ ಪಿಡಿದರೆ - ಆಕೆನಿಚ್ಚ ಶಂಖಕಂಠಳಾದಳಯ್ಯ 1


ನೀಲವರ್ಣ ನೀನಾದರೆ - ಆಕೆನೀಲಕುಂತಳೆ ತಾನಾದಳೊಲೋಲ ಕಮಲನಾಭನಾದರೆ - ಆಕೆಬಾಲ ಕಮಲಮುಖಿಯಾದಳಯ್ಯ2


ಬೆಟ್ಟವ ನೀನೊಂದು ಪೊತ್ತರೆ - ಆಕೆಬೆಟ್ಟದಂಥ ಕುಚವೆರಡು ಪೊತ್ತಳೊಮೆಟ್ಟಿ ಶೇಷನ ನೀ ತುಳಿದರೆ - ಆಕೆಕಟ್ಟಿ ಬಾಸೆಗೆ ಶೇಷನ ನಿಲಿಸಿಹಳಯ್ಯ3


ಗಜರಾಜವರದ ನೀನಾದರೆ - ಆಕೆಗಜಗಮನೆಯು ತಾನಾದಳಯ್ಯನಿಜ ನರಸಿಂಹ ನೀನಾದರೆ - ಆಕೆಭಜಿಸಿ ಸಿಂಹಮಧ್ಯೆಯಾದಳಯ್ಯ 4


ಈ ಪರಿಯೊಳು ನೀನು ಜನಿಸಿದೆ - ಭಲೆಭಾಪುರೆ ಬಾಡದೊಳು ನೆಲೆಸಿದೆಗೋಪಿಯರ ಮೋಹ ಸಲಿಸಿದೆ - ಚೆಲುವಶ್ರೀಪತಿ ಆದಿಕೇಶವರಾಯ ಮೆರೆದೆ5

***