Showing posts with label ನಿನ್ನ ಮಹಿಮೆ ಇದೇನೊ ಕನ್ನಗಾರರ ಗುರುವೆ ಅಳಗಿರಿ vijaya vittala. Show all posts
Showing posts with label ನಿನ್ನ ಮಹಿಮೆ ಇದೇನೊ ಕನ್ನಗಾರರ ಗುರುವೆ ಅಳಗಿರಿ vijaya vittala. Show all posts

Wednesday, 16 October 2019

ನಿನ್ನ ಮಹಿಮೆ ಇದೇನೊ ಕನ್ನಗಾರರ ಗುರುವೆ ಅಳಗಿರಿ ankita vijaya vittala

ವಿಜಯದಾಸ
ನಿನ್ನ ಮಹಿಮೆ ಇದೇನೊ
ಕನ್ನಗಾರರ ಗುರುವೆ ಅಳಗಿರಿ ತಿಮ್ಮರಾಯಾ ಪ

ಕ್ಷೋಣಿಯೊಳಗುಳ್ಳವರು ಕ್ಷಿಪ್ರದಲ್ಲಿ
ನಿನ್ನ ಕಾಣಿವೇನೆಂಬ ತವಕದಲಿ ಬರಲು
ಮಾಣದಲೆ ಅವರ ವಸನ ಸುಲಿಸಿ ತಡೆಯದೆ
ಮಾನವನು ಕೊಂಬ ಅಭಿಮಾನಗೇಡಿ 1

ಬ್ರಹ್ಮಾದಿಗಳು ಇಲ್ಲಿ ಸುಲಿಸಿಕೊಳಬೇಕೆಂದು
ಹೆಮ್ಮೆಯಿಂದಲಿ ನೋಡಿ ಹಿಗ್ಗುವರೋ
ಹಮ್ಮಿನದೇವ ನಿನ್ನ ಸೋಜಿಗವೆ ತಿಳಿಯದು
ಈ ಮ್ಮಹಿಯೊಳಗೆ ಇಂಥ ಸುಮ್ಮಾನವೇನೊ2

ಹಲವು ಕೇಳಿದರೇನು ನೀಚೋಚ್ಚ ಎಣಿಸಲೆ
ಒಲಿಸಿದವರಿಗೆ ನೀನು ಒಲಿದು ಎಲ್ಲಾ
ಸುಲಿಗೆಯನು ಯಿತ್ತು ಸಂತತಲವರ ಪಾಲಿಪ
ಬಲು ದೈವ ವಿಜಯವಿಠ್ಠಲ ಅಳಗಿರಿ ತಿಮ್ಮಾ3
*********