ನಿರಂಜನ ಈಶ ಬಾರೊ ಕಾವ ಕರುಣ ಭವಭಂಜನ ಗುರು ಆತ್ಮ ಹಂಸ ಬಾರೊ ಪ
ಅಗಣಿತ ಗುಣ ಅಗಾಧ ಅಪಾರಾಗಮ್ಯ ಬಾರೊ ನಿತ್ಯ ನಿರ್ಗುಣಾನಂದನುಪಮ್ಯ ಬಾರೊ ಯೋಗಿ ಜನರ ಹೃದಯ ಮುನಿಮನೋರಮ್ಯ ಬಾರೊ ಜಗದೊಳು ಭಕ್ತಜನರಿಗೆ ಪೂರಿತಕಾಮ್ಯ ಬಾರೊ 1
ಝಗಿಝಗಿಸುವ ಜಗಜ್ಯೋತಿ ಜಗನ್ಮೋಹನ ಬಾರೊ ಮಘ ಮಘ ಮಿಂಚುವ ಮಗುಟಮಣಿ ಗುಣರನ್ನ ಬಾರೊ ಬಗೆಬಗೆಯಿಂದ ಸದ್ಗೈಸುವ ಪತಿತಪಾವನ್ನ ಬಾರೊ 2
ಋಷಿ ಮುನಿವಂದಿತ ಸಾಧು ಜನ ಹೃದಯ ಬಾರೊ ಗುಹ್ಯ ಬಾರೊ ದಾಸ ಮಹಿಪತಿಯ ರಕ್ಷಿಸುವ ಪ್ರಾಣ ಪ್ರಿಯ ಬಾರೊ 3
***