ನಿಲ್ಲ ಬಾ ನಿಲ್ಲ ಬಾ ಮೆಲ್ಲಮೆಲ್ಲನೆ ಹೆಜ್ಜೆನಿಟ್ಟುನಿಲ್ಲ ಬಾರೋ ಕೃಷ್ಣಾ ನಿಲ್ಲ ಬಾರೋ ಪ
ದುಷ್ಟ ಪೂತನಿಯ ದೊಡ್ಡ ಹೊಟ್ಟೆಯೊಳಾಡಿದಿ ಮಂದಿದೃಷ್ಟಿ ತಾಕಿಹುದೊ ರಕ್ಷೆನಿಟ್ಟು ಮುದ್ದಿಸುವೆ 1
ಆಲಯದಂಗಳದೊಳು ಲೀಲೆ ಮಾಡುವಿಯೊ ಕೆಟ್ಟಬಾಲೆಯರ ಗಾಳಿ ಸೋಕಿಹುದೋ ಹಣ್ಣು ನಿವಾಳಿಸಿಒಗೆವೆ ಕೃಷ್ಣ 2
ಇಂದಿರೇಶ ನಿನ್ನ ಬಹುಮಂದಿ ನೋಡುವರೋ ದೃಷ್ಟಿಇಂದು ಆಗಿಹುದೊ ಮಾಳ್ಪೆ ಕದಲಾರತಿಯ ಕೂಸೆ 3
****