ನೀನೆ ದಯಾಳೊ ನಿರ್ಮಲಚಿತ್ತ ಗೋವಿಂದ
ನಿಗಮಗೋಚರ ಮುಕುಂದ ||ಪ||
ಜ್ಞಾನಿಗಳರಸ ನೀನಲ್ಲದೆ ಜಗಕಿನ್ನು
ಮಾನದಿಂದಲಿ ಕಾವ ಧೊರೆಗಳ ನಾ ಕಾಣೆ ||ಅ.ಪ||
ದಾನವಾಂತಕ ದೀನಜನಮಂದಾರನೆ
ಧ್ಯಾನಿಪರ ಮನಸಂಚಾರನೆ
ಮೌನವಾದೆನು ನಿನ್ನ ಧ್ಯಾನಾನಂದದಿ ಈಗ
ಸಾನುರಾಗದಿ ಕಾಯೋ ಸನಕಾದಿವಂದ್ಯನೆ ||1||
ಬಗೆ ಬಗೆಯಲಿ ನಿನ್ನ ಸ್ತುತಿಪೆನೋ ನಗಧರ
ಖಗಪತಿವಾಹನನೆ
ಮಗುವಿನ ಮಾತೆಂದು ನಗುತ ಕೇಳುತ ಬಂದೆ
ಬೇಗದಿಂದಲಿ ಕಾಯೋ ಸಾಗರಶಯನನೆ ||2||
ಮಂದರಧರ ಅರವಿಂದಲೋಚನ ನಿನ್ನ
ಕಂದನೆಂದೆಣಿಸೊ ಎನ್ನ
ಸಂದೇಹವೇಕಿನ್ನು ಸ್ವಾಮಿ ಮುಕುಂದನೆ
ಬಂದೆನ್ನ ಕಾಯೋ ಶ್ರೀಪುರಂದರವಿಠಲ ||3||
***
Neene dayaalu nirmala chitta govinda |
Nigama gochara mukunda || pa ||
J~jaanigalarasa neenallade jagakinnu |
Maanadindali kaayva doregala naa kaane || a.pa.||
Daanavaantaka deena jana mandaarane |
Dhyaanipara mana sanchaarane ||
Mounanaadenu ninna dhyaanaanandadi eega |
Saanuraagadi kaayo sanakaadi vandyane || 1 ||
Bage bageyali ninna stutipeno nagadhara |
Kagapati vaahanane |
Maguvina maatendu naguta keli neenu |
Begadindali kaayo saagara shayanane || 2 ||
Mandaradhara aravindalocana ninna |
Kandanendeniso enna |
Sandehavekinnu swaami mukundane |
Bandenna kaayo shree purundaviththala || 3 ||
***
ನೀನೇ ದಯಾಳೊ ನಿರ್ಮಲಚಿತ್ತ ಗೋವಿಂದ
ನಿಗಮಗೋಚರ ಮುಕುಂದ
ಜ್ಞಾನಿಗಳರಸ ನೀನಲ್ಲದೆ ಜಗಕಿನ್ನು
ಮಾನದಿಂದಲಿ ಕಾವ ಧೊರೆಗಳ ನಾ ಕಾಣೆ
ದಾನವಾಂತಕ ದೀನಜನಮಂದಾರನೆ
ಧ್ಯಾನಿಪರ ಮನಸಂಚಾರನೆ
ಮೌನವಾದೆನು ನಿನ್ನ ಧ್ಯಾನಾನಂದದಿ ಈಗ
ಸಾನುರಾಗದಿ ಕಾಯೊ ಸನಕಾದಿವಂದ್ಯನೆ
ಬಗೆ ಬಗೆಯಲಿ ನಿನ್ನ ತುತಿಪೆನೊ ನಗಧರ
ಖಗಪತಿವಾಹನನೆ
ಮಗುವಿನ ಮಾತೆಂದು ನಗುತ ಕೇಳುತ ಬಂದೆ
ಬೇಗದಿಂದಲಿ ಕಾಯೊ ಸಾಗರಶಯನನೆ
ಮಂದರಧರ ಅರವಿಂದಲೋಚನ ನಿನ್ನ
ಕಂದನೆಂದೆಣಿಸೊ ಎನ್ನ
ಸಂದೇಹವೇಕಿನ್ನು ಸ್ವಾಮಿ ಮುಕುಂದನೆ
ಬಂದೆನ್ನ ಕಾಯೊ ಶ್ರೀಪುರಂದರವಿಠಲ
***
ನಿಗಮಗೋಚರ ಮುಕುಂದ
ಜ್ಞಾನಿಗಳರಸ ನೀನಲ್ಲದೆ ಜಗಕಿನ್ನು
ಮಾನದಿಂದಲಿ ಕಾವ ಧೊರೆಗಳ ನಾ ಕಾಣೆ
ದಾನವಾಂತಕ ದೀನಜನಮಂದಾರನೆ
ಧ್ಯಾನಿಪರ ಮನಸಂಚಾರನೆ
ಮೌನವಾದೆನು ನಿನ್ನ ಧ್ಯಾನಾನಂದದಿ ಈಗ
ಸಾನುರಾಗದಿ ಕಾಯೊ ಸನಕಾದಿವಂದ್ಯನೆ
ಬಗೆ ಬಗೆಯಲಿ ನಿನ್ನ ತುತಿಪೆನೊ ನಗಧರ
ಖಗಪತಿವಾಹನನೆ
ಮಗುವಿನ ಮಾತೆಂದು ನಗುತ ಕೇಳುತ ಬಂದೆ
ಬೇಗದಿಂದಲಿ ಕಾಯೊ ಸಾಗರಶಯನನೆ
ಮಂದರಧರ ಅರವಿಂದಲೋಚನ ನಿನ್ನ
ಕಂದನೆಂದೆಣಿಸೊ ಎನ್ನ
ಸಂದೇಹವೇಕಿನ್ನು ಸ್ವಾಮಿ ಮುಕುಂದನೆ
ಬಂದೆನ್ನ ಕಾಯೊ ಶ್ರೀಪುರಂದರವಿಠಲ
***