ಕಾಖಂಡಕಿ ಶ್ರೀ ಕೃಷ್ಣದಾಸರು
ನೀನೇ ನಿನ್ನ ಮರೆದಿಹುದೇನು ಮನವೇ | ಸುಜ್ಞಾನದಿಂದ ನಿಜವನೀ ನರಿಯಲಿಲ್ಲವೇ ಪ
ಶ್ವಾನ ಸೂಕರಾದಿ ಅತಿ ಹೀನ ಯೋನಿಯಲಿ ಸುಖದೊಳು | ನಾನಾ ಪರಿಯಲಿ ಬಾಹುದೇನು ಅನುವೇ 1
ಹರಿವ ಮೃಗಜಲಕ ಬೆಂಬತ್ತಿ ಪೋಪಾ ಹರಿಣನಂತೆ | ಹರಿದು ವಿಷಯ ಕೂಡಾ ಕೆಡುದೇನು ಗುಣವೇ 2
ನಿನ್ನ ಬಯಕೆಯಂತಾದಡೆ ಮನ್ನಿಸುವ ಅಲ್ಲದಡೆ | ಘನ್ನ ಚಿಂತೆಯೊಳು ಬೀಳುತಿಹುದೇನು ಸುಖವೇ 4
ನೆನೆದು ತರಿಸು ಮಹಿಪತಿ ಚರಣಾ ಚಿನ್ನ ಕೃಷ್ಣ ನಾ | ತನುವಿನೊಳಗಾಡುತಿಹ ನಿಜ ಮನವೇ 5
***