ನೀರಜಾಕ್ಷ ನಿರ್ದಯವ್ಯಾಕೊ ಕರುಣದಿ ಎನ್ನಾ ಪ
ಒಡಲಿಗನ್ನಾ ತೊಡಲು ಅರಿವೆ ಕೊಡುವವರನು ನಾ ಕಾಣೆ ಹರಿಯೇ
ಬಡತನ ಕಂಗೆಡಿಸಿತೋ ಕಡೆಗ್ಹಾಯಿಸಯ್ಯ ತ್ವರದಿ ಗುಣಮಣಿಯೇ 1
ಖೂಳ ಜನರ ಆಳಾಗಿ ನಾ ಹಾಳು ಒಡಲನ್ನು ಹೊರೆಯಲಾರೇ
ಕೂಳಿಗೋಸುಗ ಬಾಳಾಯ್ತೀಪರಿ ತಾಳಲಾರೆ ಕಾಯೋ ಮುರಾರೇ2
ಕಷ್ಟಾಬಟ್ಟಾ ದುಷ್ಟಾಮೃಗ ನಾನು ದೃಷ್ಟಿಲಿ ನೋಡೋ
ನೀ ಕೈಬಿಡಬ್ಯಾಡೋ
ಶ್ರೀ ಹನುಮೇಶವಿಠಲನೆ ಎನ್ನಾ ಇಷ್ಟದಂದರಿ ಥಟ್ಟನೆ ಮಾಡೋ 3
****