Showing posts with label ನೆಚ್ಚದಿರು ಸಂಸಾರ ನೆಲೆಯಲ್ಲವೀ ಕಾಯ ಅಚ್ಯುತನ neleyadikeshava NECHCHADIRU SAMSARA NELEYALLAVEE KAAYA ACHYUTANA. Show all posts
Showing posts with label ನೆಚ್ಚದಿರು ಸಂಸಾರ ನೆಲೆಯಲ್ಲವೀ ಕಾಯ ಅಚ್ಯುತನ neleyadikeshava NECHCHADIRU SAMSARA NELEYALLAVEE KAAYA ACHYUTANA. Show all posts

Thursday, 16 December 2021

ನೆಚ್ಚದಿರು ಸಂಸಾರ ನೆಲೆಯಲ್ಲವೀ ಕಾಯ ಅಚ್ಯುತನ ankita neleyadikeshava NECHCHADIRU SAMSARA NELEYALLAVEE KAAYA ACHYUTANA

 ..

ನೆಚ್ಚದಿರು ಸಂಸಾರ ನೆಲೆಯಲ್ಲವೀ ಕಾಯಅಚ್ಯುತನ ನಾಮವನು ನೆನೆದು ಸುಖಿಯಾಗೊ ಪ

ಗಳಿಸದಿರು ಸೀಮೆಯನು ಗಳಿಸದಿರು ದ್ರವ್ಯವನುಗಳಿಸದಿರು ನೀ ದುರಿತರಾಶಿಗಳನುನಳಿನನಾಭನ ದಿವ್ಯ ನಾಮವನು ನೆನೆನೆನೆದುನೆಲೆಯಾದ ಪರಮ ಪದವಿಯ ಪಡೆಯೊ ಮನವೆ 1

ನೋಡದಿರು ಪರಸತಿಯ ಕೂಡದಿರು ದುರ್ಜನರಆಡದಿರು ಮಾತುಗಳ ಗರ್ವದಿಂದಬೇಡದಿರು ಕೈಯ ಹಿಂದೆಗೆವ ಲೋಭಿಯನು, ಕೊಂ-ಡಾಡದಿರು ಬೀದಿಗೂಳುಂಬ ದೈವಗಳ 2

ನಾನಾ ಜನ್ಮದಿ ಬಂದ ನಾಟಕದ ಬೊಂಬೆಯಿದುಮಾನಕ್ಕೆ ಮೆಚ್ಚಿ ನೀ ಮರುಳಾಗದೆಜಾಣತನದಿಂ ಕಾಗಿನೆಲೆಯಾದಿಕೇಶವನಮಾನಸದಲಿ ನೆನೆದು ಸುಖಿಯಾಗು ಮನುಜ 3

***