ಕಾಖಂಡಕಿ ಶ್ರೀ ಕೃಷ್ಣದಾಸರು
ನೆನೆಯೋ ನೀ ಎನ್ನ ಮನವೇ| ಅನುಪಮ್ಯ ಶ್ರೀ ಮುಕುಂದನಾ| ಚಕೋರ ಸುನಕ್ಷತ್ರೇಶ ಗೋಪಾಲನಾ| ಶ್ರೀಲೊಲನಾ ನಂದಬಾಲನಾ ಪ
ವರಭಕ್ತ ಧೃವಗ ಸ್ಥಿರಪದ ವಿತ್ತನಾ| ಧರಣಿಯ ಭಯಹರ ಪುರುಷೋತ್ತಮನಾ| ಉರಗ ತುಳಿದವನಾ| ಉರಗಶಯನುರಗಾ ಭರಣನ ಸಖನಾ| ಸುನಖನ ಅಬ್ಬ ಮುಖನಾ 1
ದುರಿತ ನಿವಾರಕನಾ| ಕರುಣಾದೀ ಅಹಲ್ಯಯ ನುದ್ಧರಿಸಿದನಾ ಸರಸಿಜ ಸಮಪದ ಸರಸಿಜನಾಭನಾ| ಸರಿಸಿಜ ಪಾಣಿಯ ಸರಸಿಜ ನೇತ್ರನಾ 2
ಸುಚರಿತ್ರನಾ ಮುನಿಸ್ತೋತ್ರನಾ| ಗುರುವರ ಮಹಿಪತಿ ನಂದನ ಜೀವನಾ| ಗಿರಿವರಧಾರನಾ ಕಂಸಾಸುರ ಮರ್ಧನಾ| ಶರಧಿ ನಿವಾಸನಾ| ಹರಿಶತ ಕಿರಣ ಹರಿಸುತ ಪ್ರೀಯನಾ| ಸ್ಮರಸೈಯ್ಯನಾ ಕೃಷ್ಣರೇಯನಾ3
***