Showing posts with label ನೋಡಿ ದಣಿಯವೆನ್ನ ಕಂಗಳು ಈ ಸೋದೆಲಿರುವ bheemesha krishna. Show all posts
Showing posts with label ನೋಡಿ ದಣಿಯವೆನ್ನ ಕಂಗಳು ಈ ಸೋದೆಲಿರುವ bheemesha krishna. Show all posts

Wednesday, 1 September 2021

ನೋಡಿ ದಣಿಯವೆನ್ನ ಕಂಗಳು ಈ ಸೋದೆಲಿರುವ ankita bheemesha krishna

 ..

ನೋಡಿ ದಣಿಯವೆನ್ನ ಕಂಗಳು ಈ ಸೋದೆಲಿರುವ

ಈಡು ಇಲ್ಲದುತ್ಸವಂಗಳ

ಬೇಡಿದವಗೀ ಧ್ವಜಬುತ್ತಿ (?) ನೀಡಿ ದಯಸೂರ್ಯಾಡುವರ ಪ


ಯತಿಗಳ ಸಮೂಹವೆಷ್ಟು ಮಿತಿಯಿಲ್ಲದ ಬ್ರಾಹ್ಮಣ್ಯವೆಷ್ಟು

ಮತಿಹೀನರಿಗೆ ಗತಿಯ ಕೊಡುವ ಪೃಥಿವಿಗಧಿಕ ಗುರುಗಳನ್ನು 1


ಭೂತನಾಥಗೆರಗಿ ನಿಂತು ವಾತಸುತಗೆ ಕೈಯ ಮುಗಿದು

ಆತ ನಾರಾಯಣಭೂತನೆಂಬೋ ನೀತವಾದ ದೂತನಂತೆ2


ಕೊಳಲ ಕೃಷ್ಣ ಧವಳಗಂಗಾ ಹೊಳೆಯೊ ಮುತ್ತಿನ ಗದ್ದಿಗೆ ಮ್ಯಾಲೆ

ಕಳೆಯು ಸುರಿವೊ ಕಮಲಪಾದ ಇಳೆಯೊಳ್ ಇಲ್ಲೀಳಿಗೆಯ ಪೂಜೆ 3


ಸನಕಾದಿ ಸುರೇಶನೆದುರು ಕಣಕ ಹ್ವಾಲಗ (ಹೋಳಿಗೆ?)ವನ್ನೆ ಮಾಡಿ

ಮನಕೆ ಬಂದ ಮೃಷ್ಟಾನ್ನವನು ಜನಕೆ ತೃಪ್ತಿಬಡಿಸುತಿರಲು 4


ಸುತ್ತ ವೃಂದಾವನದ ಮಧ್ಯೆ ಉತ್ತಮರಾದ ವಾದಿರಾಜರು

ಸತ್ಯವತಿಯ ಸುತರ ಎದುರು ನಿತ್ಯಾನಂದಭರಿತರಾಗಿ 5


ಸೃಷ್ಟಿಗಧಿಕಾನಂತಾಸನವು ಶ್ವೇತದ್ವೀಪ್ವೈಕುಂಠವೆಂಬೊ

ಮುಕ್ತಸ್ಥಳದಲ್ವಾಸವಾದ ಲಕ್ಕುಮಿ ತ್ರಿವಿಕ್ರಮನ 6


ನೇಮನಿಷ್ಠ ಸೇವಕ ಜನಕೆ ಬೇಡಿದ ಇಷ್ಟಾರ್ಥ ಕೊಡುವೊ

ಭೀಮೇಶಕೃಷ್ಣ ದಯದಿ ನೋಡಿದೆ ಹಯವದನನಂಘ್ರಿ 7

***