ನೋಡು ಮನವೆ ನಿನ್ನೊಳಾತ್ಮನ ನೋಡು ಮನವೆ ಪ
ಸಾಧುಸಂಗವ ನೀ ಮಾಡಿ ಭೇದ ಬುದ್ಧಿಯ ಹೋಗಾಡಿ ಆದಿತತ್ವವ ನೀ ನೋಡಿ ಸದಮಲಾನಂದ ಕೂಡಿ1 ಕಾಮಕ್ರೋಧವ ಕಳೆದು ಮಮತಾ ಮಾಯವನಳಿದು ತಾಪ ತೊಳೆದು ಶಮದಮಾದಿ ತಿಳಿದು 2
ನಾನು ನೀನೆಂಬುದು ನೀಗಿ ಜ್ಞಾನದಿಂದ ಗುಪ್ತನಾಗಿ ಭಾನುಕೋಟಿತೇಜನಂಘ್ರಿ ಬೆರೆದು ನಿಶ್ಚಿಂತನಾಗಿ 3
ಅವಿದ್ಯುಪಾಧಿಯ ಜರಿದು ಮೂವಿಧ ಮದ ಮುರಿದು ಪವಿತ್ರ ಪ್ರಣವರಿದು ಸುವಿದ್ಯ ಸುಖಬೆರೆದು 4
ಬಾಹ್ಯಾಂತ್ರದೊಳಿಹ ಪೂರ್ಣ ಮಹಾಗುರುನಿರಂಜನ ಇಹ ಪರತ್ರ ಸಾಧನ ಮಹಿಪತಿ ಅಂತರಾತ್ಮನ 5
****