ಶ್ರೀ ಸತ್ಯಪರಾಯಣರು stutih (period of ashrama 1843-1863)
ನೋಡು ಮನವೆ ಸತ್ಯಪರಾಯಣರ ಪದಗಳ
ಬೇಡು ಬೇಡು ಬೇಡಿದಿಷ್ಟವೀವ ಯತಿಗಳ ಪ
ಮಾರುತಿಯ ಬಲದಿ ದಕ್ಷಿಣ ದೇಶವ ಜೈಸಿದಾ
ಸಾರಸಚ್ಛಾಸ್ತ್ರವನ್ನು ಸ್ಥಿರವಗೊಳಿಸಿದಾ
ನಾರಾಯಣನ ಜಗತ್ಕಾರಣನೆನಿಸಿದಾ
ಧೀರ ಸತ್ಯಸಂತುಷ್ಟ ಕುವರನೆನಿಸಿದಾ 1
ಭೀಮಸೇನ ಸನ್ಮತ ಸರಿಯಾಗಿ ನಡಿಸಿದಾ
ಪ್ರೇಮದಿಂದ ರಘುಜಿಗೆ ವನಮಾಲೆ ಮುಡಿಸಿದಾ
ತಾಮಸ ಮತದವರ ಮತವ ಮುರಿದು ಹಾಕಿದಾ
ರಾಮನ್ನಾಮ ನುಡಿಸಿ ನುಡಿಸಿ ಹರುಷಬಡಿಸಿದಾ2
ವರ ಕದರುಂಡಲಗೀಶನ್ನೊಡೆಯ ರಾಮನ್ನ
ನಿರುಪಮಾನಂದ ತೀರ್ಥ ಸುಪ್ರೇಮನ್ನ
ಕರುಣದಿಂದ ಶಿಷ್ಯನಾಗಿ ಸಂದೋಹಪಾಲನ್ನ
ಸ್ಮರನ ಜನಕಾ ಪಾಂಡುರಂಗನ ಸ್ಮರಿಪ ಲೋಲನ್ನ 3
***