Showing posts with label ನೋಡುವ ಬನ್ನಿ ಪೂಜೆ ಮಾಡುವ ಬನ್ನಿ gurumahipati. Show all posts
Showing posts with label ನೋಡುವ ಬನ್ನಿ ಪೂಜೆ ಮಾಡುವ ಬನ್ನಿ gurumahipati. Show all posts

Wednesday, 1 September 2021

ನೋಡುವ ಬನ್ನಿ ಪೂಜೆ ಮಾಡುವ ಬನ್ನಿ ankita gurumahipati

 

ಕಾಖಂಡಕಿ ಶ್ರೀ ಕೃಷ್ಣದಾಸರು

ನೋಡುವ ಬನ್ನಿ ಪೂಜೆ ಮಾಡುವ ಬನ್ನಿ | ಪಾಡಿ ನಲಿದಾಡುತಲಿ ಎನ್ನೊಡೆಯಾ ಲಿಂಗಗ ಪ 


ದೇಹ ದೇವಾಲಯದಲ್ಲಿ ಹೃದಯ ಜಲ ಹರಿಯಲಿ | ಊಹಿಸಿ ನೆಲೆಯಾಗಿ ಹೊಳೆವ ಆತ್ಮಲಿಂಗಗ 1 

ಜ್ಞಾನದಭಿಷೇಕ ಸಮ್ಯಕ್ ಜ್ಞಾನದಾ ವಸ್ತ್ರ ನೀಡಿ | ಧ್ಯಾನದೀಪಾ ಸಂಚಿತದ ಧೂಪಾರತಿಯಾ ಲಿಂಗಗ 2 

ಭಾವಭಕ್ತಿ ಗಂಧಾಕ್ಷತೆ ಸುಮನ ಪುಪ್ಪದಲಿಂದು ಅವಗು ಸುವಾಸನೆಯು ಪರಿಮಳ ಲಿಂಗಗ 3 

ಘನ ಗುರು ಮಹಿಪತಿ ಸುತ ಪ್ರಭುಲಿಂಗಗ 4

***