ನೋಡುವ ಬನ್ನಿ ಸ್ವಾಮಿಯ ಅಂತರ್ಯಾಮಿಯ ಭಕ್ತಿಯ ದೃಢಯುಕ್ತಿಯ 1
ದೇವದೇವನ ಪೂರ್ಣ ನೋಡುವ ಸೇವೆಮಾಡುವ ಸರ್ವದಾ ಕೊಂಡಾಡುವ ನವವಿಧ ಭಕ್ತಿಯ ಮಾಡುವ ಭಾವವಿಡುವ 2
ತನು ಮನಧನ ಅರ್ಪಿಸಿ ಬಿಡುವ ಮನಗೂಡುವ ಪ್ರಾಣಾಯಾಮ ಮಾಡುವ ಅನುದಿನ ಸಾಧಿಸಿ ನೋಡುವ ಘನಗೂಡುವ 3
ಇಡಾಪಿಂಗಳ ಮಧ್ಯ ನೋಡುವ ನಡೆವಿಡುವ ನಡುಹಾದಿಗೂಡುವ ಒಡನೆ ಸ್ವಸುಖ ಪಡೆವ ಗೂಢ ನೋಡುವ 4
ಸವಿಸುಖಸಾರ ಸುರುತದೆ ದ್ರವಿಸುತದೆ ಠವಠವಿಸುತದೆ ರವಿಕೋಟಿಪ್ರಭೆ ಭಾಸುತದೆ ಆವಾಗಲ್ಯದೆ 5
ಏನೆಂದನಬೇಕನುಭವ ಖೂನದೋರುವ ಘನ ಮಳೆಗರೆವ ಸ್ವಾನುಭವದಲಿ ಸೇವಿಸುವ ಅನುಸರಿಸುವ 6
ಜಾಗಿಸುತ್ತದೆ ವಸ್ತುಮಯ ಬಗೆಬಗೆಯ ಯೋಗ ಇದೆ ನಿಶ್ಚಯ ಸುಗಮಸಾಧನ ಮಹಿಪತಿಯ ಸುಜ್ಞಾನೋದಯ 7
****