Showing posts with label ನೋಡುವಾ ಬನ್ನಿರೆ ರಂಗಯ್ಯನ ನೋಡುವಾ ಬನ್ನಿರೇ venkatakrishna. Show all posts
Showing posts with label ನೋಡುವಾ ಬನ್ನಿರೆ ರಂಗಯ್ಯನ ನೋಡುವಾ ಬನ್ನಿರೇ venkatakrishna. Show all posts

Tuesday, 1 June 2021

ನೋಡುವಾ ಬನ್ನಿರೆ ರಂಗಯ್ಯನ ನೋಡುವಾ ಬನ್ನಿರೇ ankita venkatakrishna

 ನೋಡುವಾ ಬನ್ನಿರೆ ರಂಗಯ್ಯನ ನೋಡುವಾ ಬನ್ನಿರೇ ಪ.


ರೂಢಿಗೊಡೆಯ ಹರಿಯಕೂಡಿ ಇಷ್ಟಾರ್ಥವ

ಬೇಡಿಕೊಳ್ಳುವ ನಾವು ಅ.ಪ.


ಕುಂಭಮಾಸದಲಿ ಭಕ್ತರು ಬಿಟ್ಟಾನಂದಮಂಟಪದಿನಿಂದು ಪೂಜೆ

ಗೊಂ[ಬ] ಹರುಷದಿ ಮಂದಹಾಸದಿ ಬಂದ ಶ್ರೀರಂಗನ 1


ಹಂಸ ಯಾಳಿ ಸಿಂಹ ಆನೆಯು ಮೊದಲಾದ ಗರುಡ ಹನುಮ ಕಲ್ಪ

ವೃಕ್ಷವು ಸರ್ಪವಾಹನವೇರಿ ಅರ್ಥಿಯಿಂದಲೆ ಬರುವ ಶ್ರೀರಂಗನ 2


ಶುದ್ಧದಶಮಿಯಲಿ ರಂಗಯ್ಯ ಮುದ್ದು ಸತಿಯರ ಒಡಗೊಂಡು ಅ

ಲ್ಲಿದ್ದ ಮಂಟಪದಲಿ ಹರುಷದೀ ತಾನಿ[ದ್ದ] ಶ್ರೀರಂಗನ 3


ತೆಪ್ಪಮಂಟಪವ ಭಕ್ತರೆಲ್ಲ ವಿಸ್ತಾರದಲಿ ಕಟ್ಟಿ ಪತ್ನಿಸಹಿತಲೆ

ತೆಪ್ಪವ ಹತ್ತಿ ಸುತ್ತಿಸುತ್ತಿ ಮೂರುಬಾರಿ ಬರುವ [ಶ್ರೀರಂಗನ] 4


ಮಧ್ಯಮಂಟಪದಿ ತಾನಿದ್ದು ಭಕ್ತರಿತ್ತ [ಸವಿಯಾದ] ಕ್ಷೀರವು

ಉದ್ದಿನವಡೆ ಹುಗ್ಗಿ ಮೆದ್ದು ಬರುವ ಶ್ರೀಮುದ್ದುರಂಗನ 5


ಪುಷ್ಪಬಾಣಂಗಳು ಸುತ್ತಿಬಿಡುವ ಚಕ್ರಬಾಣಂಗಳು ನಕ್ಷತ್ರಬಾಣಂಗಳ

ಲಕ್ಷ್ಮಿಯೆದುರಲರ್ತಿಯಿಂದಲೆ ನೋಡಿ ನಿಂದ ಶ್ರೀರಂಗನ 6


ಏಕಾದಶಿಯಲಿ ಚಂದ್ರಪ್ರಭೆಯನೇರಿ ಸಹಸ್ರ[ಕಂ]ಗಳಿಂದ ಭಕ್ತರಿಗೆ

ತಾ ಕರುಣದಿಂದಲೆ ತೀರ್ಥಸ್ನಾನವನಿತ್ತು ಬರುವ ವೆಂಕಟರಂಗನ 7

****