Showing posts with label ನೋಡೊ ನೋಡೋ ನಿನ್ನೊಳು ನಿಜಾ gurumahipati. Show all posts
Showing posts with label ನೋಡೊ ನೋಡೋ ನಿನ್ನೊಳು ನಿಜಾ gurumahipati. Show all posts

Wednesday 1 September 2021

ನೋಡೊ ನೋಡೋ ನಿನ್ನೊಳು ನಿಜಾ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ನೋಡೊ ನೋಡೋ ನಿನ್ನೊಳು ನಿಜಾ ಪ 


ಮೂಢತನವ ಬಿಟ್ಟು ಕೂಡಿ ಭಾವ ಭಕ್ತಿಯಾ | ಪಾಡಿ ಕೊಂಡಾಡಿ ಸೂರ್ಯಾಡೆಲೋ ಹರಿನಾಮಾ ಅ.ಪ ನಾನು ನನ್ನದು ಯಂದು ಹೀನ ವೃತ್ತಿಗೆ ಬಿದ್ದು | ನಾನಾ ಬವಣೆಯಲ್ಲಿ ತೊಳಲುತ ತೊಳಲುತ | ಗಳೆವರೇ ದಿನವನು 1 

ಸನ್ನುತ ಗುರುಪಾದ ಮನ್ನಿಸಿ ಪಡೆಯಲೋ ಬೋಧಾ | ಬನ್ನ ಬಡುವದೇನು ಕಣ್ಣದೆರೆನ್ನಾರೆ ತನ್ನತಾ ಮರೆವರೆ 2 

ಗುರುಮಹಿಪತಿ ಸ್ವಾಮಿ ಸುರಮುನಿಜನ ಪ್ರೇಮಿ | ಮೊರೆ ಹೊಕ್ಕವರ ಕೈಯ್ಯಾ ಜರಿಯೂತಾ ಮರಿಯಾ | ನೀ ನರಿಯದೆ ಕೆಡಬ್ಯಾಡಾ 3

***