ಪತಿವ್ರತೆ ಹ್ಯಾಂಗಿರಬೇಕು ನಿಜವಾಗಿ ಪ
ರತಿಪತಿಪಿತನನ್ನು ಪತಿಯಲ್ಲಿ ನೆನೆಯುತ್ತ ಅ.ಪ.
ಹೊತ್ತಾರೆ ಏಳಬೇಕು ಪತಿಗೆ ವಂದಿಸಬೇಕು
ನಿತ್ಯತುಳಸಿಗೆರಗಿಕೃತ್ಯಮಾಡಲಿಬೇಕು
ಅತ್ತೆಮೆಚ್ಚಿಸಬೇಕು ತೊತ್ತಿನಂತಿರಬೇಕು
ರತಿಯ ನೀಡುತ ಪತಿಗೆ ಹಿತದಿಂದ ಬಾಳಬೇಕು 1
ಮಿತಮಾತು ಇರಬೇಕು ಸುತರ ಪಾಲಿಸಬೇಕು
ಮತಿಮತದಿ ನಡಿಬೇಕು ಅತಿಥಿ ಪೂಜಿಸಬೇಕು
ವ್ರತನೇಮ ವಿರಬೇಕು ಗತಿ ಹರಿಯೆ ತಿಳಿಬೇಕು
ಮಾತ್ಸರ್ಯಬಿಡಬೇಕು ತೃಪ್ತಿಯಿರಲಿಬೇಕು 2
ನೆರೆಹೊರೆ ಗಂಜಬೇಕು ತಿರುಗೋದು ಬಿಡಬೇಕು
ತಿರಿ ತಿಂಡಿ ಬಿಡಬೇಕು ಹರಟೆಗಳ ಬಿಡಬೇಕು
ಹರಿಕಥೆ ಕೇಳಬೇಕು ಹರಿದಿನ ಮಾಡಬೇಕು
ಹರಿಯ ಪಾಡಲಿಬೇಕು 3
ನೆಟ್ಟಕುಂಕುಮ ಬೇಕು ಕೆಟ್ಟವರ ಬಿಡಬೇಕು
ಕಟ್ಟಿ ಆಶೆಯ ಬಿಟ್ಟು ತೃಪ್ತಿಯಿಂದಿರಬೇಕು
ಕಷ್ಟಬಂದರು ಬಹು ಗುಟ್ಟಿನಿಂದಿರಬೇಕು
ನೆಂಟರೊಡನೆ ಕಠಿಣ ನಿಷ್ಟೂರ ಬಿಡಬೇಕು 4
ಚುಚ್ಚಬಾರದು ಚಾಡಿ ಬಿಚ್ಚಬಾರದು ಗಾಡಿ
ಹಚ್ಚಬಾರದು ವಿಷಯ ಕೊಚ್ಚಬಾರದು ಜಂಭ
ಮುಚ್ಚಬಾರದು ನಿಜವ ಹಚ್ಚಬಾರದು ಷೋಕು
ಹುಚ್ಚಳಂತಿರದ್ಹಾಂಗೆ ಸ್ವಚ್ಚನಡತೆಯು ಬೇಕು 5
ಪಾಪವ ತೊರಿಬೇಕು ಲೇಪನವ ಬಿಡಬೇಕು
ಕೋಪವ ಬಿಡಬೇಕು ಕಪಟತ್ವ ಬಿಡಬೇಕು
ರೂಪ ಮದವ ಬಿಟ್ಟು ಚಪಲತ್ವ ತೊರಿಬೇಕು
ವಿಪರಿತ ಮಡಿಬಿಟ್ಟು ಶ್ರೀ ಪತಿಯ ನೆನಿಬೇಕು 6
ಅಂಗ ಶುದ್ಧಿಯು ಬೇಕು ಶೃಂಗಾರ ರಸಬೇಕು
ನಗೆಮೊಗವಿರಬೆಕು ಸವಿಮಾತು ಗುಣಬೇಕು
ಭಂಗಾರ ವಿಡಬೇಕು ರಂಗಗೆನ್ನಲಿ ಬೇಕು
ಮಂಗಳಾಂಗ ನಮ್ಮ “ಶ್ರಿ ಕೃಷ್ಣವಿಠಲ” ನ್ನ
ಹಿಂಗದೆ ನೆನೆಬೇಕು ಅಂಗಿನೀಗಲಿ ಬೇಕು 7
****