Showing posts with label ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ neleyadikeshava. Show all posts
Showing posts with label ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ neleyadikeshava. Show all posts

Wednesday, 1 September 2021

ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ankita neleyadikeshava

..

ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ ಪ


ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ಅ


ವರದನು ಕರದಲಿ ಉಷ್ಣಜಲ ಮೃತ್ತಿಕೆಯತರಲು ಕೈ ಸುಟ್ಟಾಗ ಪಣೆಯ ಠೊಣೆದು ಬೈದೆಮರಳಿ ನಾಚಿಕೆ ಇರದೆ ಚರಣಕೆ ಪಾವುಗೆ ತಂ-ದಿರಿಸಿದಪರಾಧ ಎನ್ನದೊ ನಿನ್ನದೊ ದೇವ 1


ಬಂದ ಭೃಗು ಮುನಿ ಎದೆಯನೊದೆಯೆ ಆತಗೆ ಪಾಪಅಂದು ಮೂದಲಿಸಿ ಬೈದವರಿಗೆ ದೋಷನಿಂದುದೇ ಹಣೆಯೊಳಗೆಸೆಯೆ ಭೀಷ್ಮಂಗಘವುಹೊಂದಿದಾ ಪಾಂಡವರಿಗೆ ಕುಂದು ಬಂದಿತೆ ದೇವ2


ಕುರುಡನಿಗೆ ದಾರಿಯನು ತೋರದೆ ಆತಗೆ ಮುನಿದುದರಿಗೆ ನೂಕಿದಡೆ ಅವನು ಏನು ಮಾಡುವನುಶಿರಕೆ ತಪ್ಪಾಗಿ ಗುರಿಯಿಡಲದು ಸರಳ ತಪ್ಪೆಅರಸನಾಳ ಕೊಂದಡೆ ಆರೇನು ಮಾಡುವರು 3


ಕುಣಿಸಿದರೆ ಆಡುವುದು ಬೊಂಬೆ ಸೂತ್ರಮುಖದಿಇನಿತುಂಟೆ ಕಪಟನಾಟಕ ಸೂತ್ರಧಾರಿಇನಿತಾಡಿಸಿದರಾಡುವೆ ಪಾಪ ಪುಣ್ಯಂಗಳಿಂದಎಣಿಕೆಗಾನಲ್ಲ ನೀನಲ್ಲದಿಲ್ಲ 4


ತಂದೆತಾಯಿಗಳು ತಮ್ಮ ಕಂದಗೆ ಸರ್ಪಮುಖದಿಂದ ಕಚ್ಚಿಸಲು ಆ ತಪ್ಪು ಕಂದನದೆಮುಂದರಿಯದಜ್ಞಾನಿಯೆಂದು ಕ್ಷಮಿಸೆಲ್ಲವನು ತಂದೆ ವೇಲಾಪುರದ ಆದಿಕೇಶವನೆ5

***