ಪಾಲಿಸು ಶ್ರೀನಿವಾಸ ಪಾಲಿಸೋ ಪ
ಪಾಲಿಸೋ ಯದುಕುಲ ಬಾಲಾ ಗಾನ-
ಲೋಲನೆ ಯಾಕಿಂಥ ಜ್ವಾಲಾ ಜನ್ಮ
ಬಲ್ಲೇನಾ ಸಂಸಾರಶೂಲಾ ನಿನ್ನ
ಚಾಲನದಿಂದಾದವೆಲ್ಲಾ ಪದ್ಯ
ಮಾಲೆಹಾಕುವೆ ಸಿರಿಲೋಲಾ ಆಹಾ
ಬಾಲನ ಪಡೆದು ಪಾಲಿಸಲಾರೆನೆಂದರೆ
ಸೀಲನೇ ಜನನಿ ಪದ್ಮಾಯಗಳಿಗೆ ಪೇಳ್ವೆ 1
ನಾನು ಮಾಡುವುದೆಂಬುದಿಲ್ಲಾ
ಯೆನಗಾವ ಸ್ವಾತಂತ್ರ್ಯವು ಇಲ್ಲಾ ಇರೆ
ಅನುಗಾಲ ಕಷ್ಟವು ಸಲ್ಲಾ ಎನಗೆ
ಜನುಮಾದಿ ಭಯವು ಬಿಟ್ಟಿಲ್ಲ ನೀನು
ತನುಸ್ಥಾನ ಬಿಟ್ಹೋದ ಮ್ಯಾಲೆ ಎನ್ನ
ಸ್ವಾತಂತ್ರ್ಯವು ಇಲ್ಲವಾಯಿತಲ್ಲ ಆಹಾ
ಅನುದಿನ ಹಸಿವೆ ತೃಷೆಗಳಿಂದ ಬಳಲೋ ದಾ-
ಸನು ನಿನ್ನವನಿಗೆ ಸ್ವಾಧೀನವೆಲ್ಲಿಹುದೈಯ್ಯಾ 2
ನಿತ್ಯ ಸಂಸಾರಿಯಾದೆನಗೆ ಮತ್ತೆ
ಮೃತ್ಯು ಬೆನ್ಹತ್ತಿರುವವಗೆ ಮಾಡೋ
ನಿತ್ಯ ಕರ್ಮ ಬದ್ಧ ಎನಗೆ ನೀ-
ಚತ್ವದಿದುಪಜೀವಿಸುವವಗೆ ನಾನು
ನಿತ್ಯನೆಂಬುವ ದುರಾತ್ಮನಿಗೆ ಆಹಾ
ಮುಕ್ತಿಗೊಡೆಯ ಪುರುಷೋತ್ತಮ ನಿನ್ನ ದಾ-
ಸತ್ವನಿತ್ತು ಸುಶಕ್ತನಮಾಡು ನೀ 3
ನಿನ್ನ ಆಧೀನವೊ ಎಲ್ಲಾ ನಾನು
ನಿನ್ನ ದಾಸನು ಶಿರಿನಲ್ಲಾ ಅನು-
ದಿನ ಮಾಡುವ ಕಾರ್ಯವೆಲ್ಲ ನೀನು
ಚಲನೆದಂದದಿ ಮಾಡ್ವೆನಲ್ಲಾ ಯೆಂನೊ-
ಳಾವ ತಪ್ಪಿತವೇನೋ ಇಲ್ಲಾ ನಿನ್ನ
ಸಂಕಲ್ಪದಂತಾಗೋದೆಲ್ಲಾ ಆಹಾ
ತನುವ ಕೊಟ್ಟವ ನೀನೆ ತನು ಕೊಂಡೊಯ್ವನೂ ನೀನೆ
ಹನುಮೇಶವಿಠಲಾ ನಿನ್ನವನಾದ ಮ್ಯಾಲೆನ್ನಾ4
****