..
kruti by ವಿಶ್ವೇಂದ್ರತೀರ್ಥರು vishwendra teertharu sode mutt
ಪಾಲಿಸೊ ಪಂಕಜನೇತ್ರ ರಘು
ಕುಲಾಂಬುಧಿ ಚಂದ್ರ ಶ್ರೀ ರಾಮಚಂದ್ರ ಪ
ಒಂದೇ ಭಾಷಣ ನಿನಗೊಂದೇ ಮಾರ್ಗ ಸಾಕು
ಒಂದೇ ಸ್ಥಾನದೊಳಾಶ್ರಿತರನೇ ನಿಲ್ಲಿಸುವಿ
ಒಂದೇ ಬಾರಿಯೆ ಕೊಟ್ಟುದ್ಧರಿಸುವೆÉ ಭೃತ್ಯರ
ಒಂದೇ ಪತ್ನಿಯು ನಿನಗೆಂಬುದು ಬಿರುದು 1
ನಿನ್ನ ತಮ್ಮನು ನಿನ್ನ ರಾಣಿಯ ಭೃತ್ಯನು
ನಿನ್ನಂಥ ಭಾಗ್ಯ ಮತ್ತೆಲ್ಲಿ ತೋರುವುದು
ಘನ್ನ ಮಹಿಮ ನೀನು ಮಲತಾಯಿ ನುಡಿಯಲು
ತನ್ನ ರಾಜ್ಯಗಳನ್ನು ತಮ್ಮನಿಗೊಪ್ಪಿಸಿದೆ 2
ಭರತನು ನಿನ್ನಡಿಗಾಗಿ ಬೇಡಿದರೂ ನೀ
ಹರುಷದಿಂದಲಿ ಕಾಲಾಂತರವ ಪೇಳಿರುವಿ
ಮರಳಿ ರಾಜ್ಯದಿ ಬಂದು ರಾಜೇಶ ಹಯಮುಖ
ಕರುಣಿಸಿ ಪಟ್ಟಾಭಿಷಿಕ್ತನಾಗಿರುವಿ 3
***