..
kruti by ಬೇಲೂರು ವೈಕುಂಠ ದಾಸರು belur vaikunta dasaru
ಪೊಗಳಲರಿಯೆನೆ ಲೋಕಮಾತೇ ನಿನ್ನ
ಸೊಗಸಾದ ರೂಪುರೇಖೆಯ ಸಿಂಧುಜಾತೇ ನಿಗಮವಿಖ್ಯಾತೇ ಪ
ಅಳಕ ನಿಚಯವು ಇಂದ್ರನೀಲಗಳು ತುಂಬಿಗಳು
ತಳಪುಗಳು ಯೆಸೆವ ನಳಿನಗಳು ಬಾಳೆಗಳು
ಚೆಲುವಹಿ ಸುನಾಸಿಕವು ಅಲಕೆ ಸುಮವು ಚಂಪಕವು
ಅಲರ್ವಿಲ್ಲಿನ ಧನುವೋ ಪುರ್ಬುಗಳೋ
ಪೊಳೆವರದನದಸಾಲುಗಳುಕಳಸಗಳೋ ಕುಂಡಲಗಳೋ
ವಿಲಸದಧರವು ಬಿಂಬಫಲವೋ ನವವಿದ್ರುಮವೋ
ಅಳವಟ್ಟ ಸವಿನುಡಿಯು ಗಿಣಿಯ ಸೋಲಿಪ ಪರಿಯೋ
ಕಳೆ ಪೆರ್ಚಿದಾನನವೋ ಶಶಿಯೋ
ಭಳಿರೆ ಮಳಯಜಗಂಧಿನಿ ಮಹೇಶರಿಪು ಜನನೀ 1
ಗಳವು ಶಂಖವು ಮೆರೆವ ಕದಪುಗಳು ಮುಖರಗಳು
ಬಳೆವ ಮೊಲೆಗಳು ಕನಕ ಕಲಸಗಳು ಶಿಖರಗಳು
ನಳಿದೋಳುಗಳು ಕುಸುಮ ಮಾಲೆಗಳು
ಸುಲಲಿತವಯವವೋ ಲತಾವಳಿಗಳ ತರಂಗವೋ
ತಳಿವ ಪೂಜಡೆಯೋ ಸುಲಿಪಲ್ಲವವೋ
ಬಳುಕುತಿಹ ನಡುವೋ ಅಂಬರದ ಸೂತ್ರದಲಣುವೋ
ಕಳಸವೊ ಕುಂಭವೊ ಗಿರಿಯೋ
ತೊಳಗುವ ತೊಡೆಯೆನಲೋ
ಸಲಿಲಜಾಗಾರೇ ಸಮ್ಮೋಹನಾಕಾರೇ ಸೌಂದರ್ಯಭರಿತೆ 2
ವರಜಂಘೆಗಳು ಪಂಚಶರನ ಶರಧಿಗಳೋ
ಸರಸೀರುಹ ಕೆಂದಳಿರೋ ಚರಣಗಳು ನಖಗಳು
ಸರಸೇಂದು ಮಂಡಲದ ಸಾಲುಗಳೋ
ಸುರುಚಿರಾಂಬಕೀ ದಯಾಕಾರೇ ಶುಭಚರಿತೆ ವಿಖ್ಯಾತೆ
ಪುರಹರ ಸುರೇಶ್ವರ ಸುಪೂಜಿತಾಂಘ್ರಿಸರೋಜೇ ಭಕ್ತ ಮಂದಾರೇ
ವರವೇಲಾನಗರವಾಸಿ ವೈಕುಂಠಚನ್ನಿಗರಾಯನರಸಿ ಗುಣರಾಸಿ
ದುರಿತಾಸಿ ನಮೋ ಪರಮಪದದಾಯಕಿಯೆ ಸೌಮ್ಯನಾಯಕಿಯೆ 3
***