Showing posts with label ಬಂಧುಗಳ ದಾರಿಗಾರಿದ್ದರೇನು ಇಷ್ಟಬಂಧು ತ್ರೈಜಗಕೆ ಶ್ರೀಹರಿಯಲ್ಲದೆ neleyadikeshava. Show all posts
Showing posts with label ಬಂಧುಗಳ ದಾರಿಗಾರಿದ್ದರೇನು ಇಷ್ಟಬಂಧು ತ್ರೈಜಗಕೆ ಶ್ರೀಹರಿಯಲ್ಲದೆ neleyadikeshava. Show all posts

Wednesday, 1 September 2021

ಬಂಧುಗಳ ದಾರಿಗಾರಿದ್ದರೇನು ಇಷ್ಟಬಂಧು ತ್ರೈಜಗಕೆ ಶ್ರೀಹರಿಯಲ್ಲದೆ ankita neleyadikeshava

 ..

ಬಂಧುಗಳದಾರಿಗಾರಿದ್ದರೇನು - ಇಷ್ಟಬಂಧು ತ್ರೈಜಗಕೆ ಶ್ರೀಹರಿಯಲ್ಲದೆ - ಮಿಕ್ಕಬಂದುಗಳದಾರಿಗಾರಿದ್ದರೇನು ಪ


ನೆಗಳ ಕೈಯಲ್ಲಿ ಮಾತಂಗವು ಸಿಕ್ಕಿ ಒದರಲಾಗಿ - ಆನೆಗಳೇನ ಮಾಡುತಿರ್ದವಡವಿಯಲಿನಗಜೆಯಾಳ್ದನ ಬ್ರಹ್ಮೇತಿ ಬಂದು ಕಾಡಲಾಗಿ ರುದ್ರಾದಿಗಳೇನ ಮಾಡುತಿರ್ದರಾ ಶೈಲದೊಳಗೆ 1


ದಿಂಡೆಯ ಮಾರ್ಗದಿ ಮಲತಾಯಿ ಮಗನ ಹೊಡೆಯಲುಮಂಡಲ ಪತಿ ಏನ ಮಾಡುತಿರ್ದನುಮಿಂಡಿ ಪೆಣ್ಣನು ಸಭೆಯಲ್ಲಿ ಸೀರೆ ಸುಲಿಯಲುಗಂಡರೈವರು ನೋಡಿ ಏನ ಮಾಡುತಿರ್ದರಯ್ಯ 2


ಮೃಗಚಕ್ರವರ್ತಿ ಬಹುವರನಾಗಿ ಪೋಗುತ್ತಿರೆಮಿಗೆ ಸತಿಸುತರೇನ ಮಾಡುತಿರ್ದರುಮೃಗಮಾನವಾಕಾರ ಕಾಗಿನೆಲೆಯಾದಿಕೇಶವನಲ್ಲದೆಮಿಗು ಬಂಧುಗಳದಾರಿಗಾರಿದ್ದರೇನು 3

***