Showing posts with label ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ purandara vittala. Show all posts
Showing posts with label ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ purandara vittala. Show all posts

Thursday, 5 December 2019

ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ purandara vittala

ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ
ನಿಂದೆಯಲಿ ನೊಂದೆನೈ ನೀರಜಾಕ್ಷ
ತಂದೆತಾಯಿಯು ನೀನೆ ಬಂಧುಬಳಗವು ನೀನೆ
ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣಾ||1||

ಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ
ಎಣಿಸಲಾರದ ಭವದಿ ಕಡುನೊಂದೆ ನಾನು
ಸನಕಾದಿಮುನಿವಂದ್ಯ ವನಜಸಂಭವ ಜನಕ
ಫಣಿಶಾಯಿ ಪ್ರಹ್ಲಾದಗೊಲಿದ ಶ್ರೀಕೃಷ್ಣಾ ||2||

ಭಕ್ತವತ್ಸಲನೆಂಬೊ ಬಿರುದು ಪೊತ್ತಾ ಮೇಲೆ
ಭಕ್ತರಾಧೀನನಾಗಿರಬೇಡವೆ
ಮುಕ್ತಿದಾಯಕ ನೀನು ಹೊನ್ನೂರುಪುರವಾಸ
ಶಕ್ತಗುರು ಪುರಂದರವಿಠಲ ಶ್ರೀಕೃಷ್ಣಾ ||3||
********