ಪುರಂದರದಾಸರು
ಚಿಹಿಹಳಿ ಥೂಖೋಡಿ ಪಾಪಿ ಮನವೇ ಇಂಥ |ಕುಹಕಬುದ್ಧಿಯ ನೀ ಬಿಡು ಕಾಣೋ ಮನವೇಪ
ಬಣ್ಣದ ಬೀಸಣಿಕೆಯಂತೆ ಹೆಣ್ಣು ತಿರುಗುವುದು ಕಂಡು |ಕಣ್ಣ ಸನ್ನೆಮಾಡಿ ಕೈಯ ಹೊನ್ನ ತೋರಿಸಿ ||ತಣ್ಣೀರು ಹೊಯ್ದ ಹೊಸ ಸುಣ್ಣದಂದದಿ ಕುದಿದು ಕುದಿದು |ಕಣ್ಣಿನೊಳು ಮಣ್ಣ ಚೆಲ್ಲಿ ಕೊಂಬರೇ ಮನವೆ 1
ಪಗಡೆ ಚದುರಂಗ ಲೆತ್ತವನಾಡೆ ಕರೆದರೆ |ನಿಗುರಿದುವು ಕರ್ಣಗಳು ಮೊಚ್ಚೆಯಂತೆ ||ಜಗದೀಶ್ವರನ ದಿನದಿ ಜಾಗರಕೆ ಕರೆದರೆ |ಮುಗಿಲ ಹರಿದು ಧರೆಗಿಳಿದಂತೆ ಮನವೇ 2
ವಾಸುದೇವನ ಪೂಜೆ ಒಮ್ಮೆ ಮಾಡೆಂದರೆ |ಬೇಸತ್ತು ತಲೆಯ ಚಿಟ್ಟಿಕ್ಕಿ ಕುಳಿತೆ ||ಆ ಸಮಯದಲೊಬ್ಬ ಕಾಸು ಕೊಡಲು ಅವನ |ದಾಸಿಯ ಮಗನಂತೆ ಬೆಂಬಿಡದೆ ಮನವೇ 3
ನೆರೆಮನೆ ಹೊರಮನೆ ಪ್ರಸ್ತವಾದರೆ ಅವರು |ಕರೆಯದ ಮುನ್ನವೆ ಹೊರೆಹೊರಟೆ ||ಬರಿಗಂಟು ಬರಿಮಾತು ಸುಳ್ಳುಸುದ್ದಿಯ ಹೇಳಿ |ಹಿರಿಯ ಮಗನಂತೊಡಲ ಹೊರಕೊಂಬೆ ಮನವೆ 4
ಬಿಂದು ಮಾತ್ರವೆ ಸುಖ-ದುಃಖ ಪರ್ವತದಷ್ಟು |ಸಂದೇಹವಿಲ್ಲವಿದು ಶಾಸ್ತ್ರಸಿದ್ಧ ||ಎಂದೆಂದಿಗೂ ನಮ್ಮ ಪುರಂದರವಿಠಲನ |ಹೊಂದಿಹೊಂದಿ ನೀ ಸುಖಬಾಳೊ ಮನವೆ 5
**********