ಕಾಖಂಡಕಿ ಶ್ರೀ ಮಹಿಪತಿರಾಯರು
ಬಲುಸೂಕ್ಷ್ಮ ಗುರು ಗೂಢವಿದ್ಯ ನೆಲೆವಂತಗಿದು ನಿಜವಾಗುದು ಸಾಧ್ಯ ಪ
ಕಣ್ಣಿನ ಕೊನೆ ಮುಟ್ಟಿನೋಡಿ ನಿಜಖೂನ ಉನ್ಮನವಾಗಿ ಬೆರೆದಾಡುವ ನಿಜಸ್ಥಾನ ಚೆನ್ನಾಗ್ಯಾದಾನಂದ ಘನ ಭಿನ್ನವಿಲ್ಲದೆ ಮಾಡಿ ನಿಜಗುರು ಧ್ಯಾನ 1
ಜಾಗ್ರ ನಿದ್ರೆಯ ಮಧ್ಯ ಅರವಿನೊಳು ನಿಜಗೂಡಿ ಶೀಘ್ರ ಸಿದ್ಧಾಂತನುಭವಿಸಿ ತಾಂ ನಿಜಮಾಡಿ ಅಗ್ರ ಗುರುಪಾದವನು ಕೂಡಿ ಶುಕ ಮುನಿಗಳಿಗಿದೆ ನೋಡಿ 2
ಶಿರದಲಿ ಕರವಿಟ್ಟು ನೋಡಿ ನಿಜವರ್ಮ ಹರಿಸಿ ಅನೇಕ ಜನ್ಮಾಂತರದ ದುಷ್ಕರ್ಮ ತರಳಮಹಿಪತಿಗಿದೆ ಸುಬ್ರಹ್ಮ ಗುರು ಭಾಸ್ಕರಸ್ವಾಮಿ ಶ್ರೀಪಾದ ಧರ್ಮ 3
***