..
kruti by bagepalli shesha dasaru ಬಾಗೇಪಲ್ಲಿ ಶೇಷದಾಸರು
ಬಾ ಬಾ ರಾಘವ ಬಾ ವೀರ ರಾಘವ ಪ
ಮತ್ಸ್ಯರೂಪನಾಗಿ ಹೆಚ್ಚಿದ ದೈತ್ಯನ
ಇಚ್ಛೆಯಿಂದಲಿ ಕೊಂದ ಅಚ್ಯುತರಾಯನೆ 1
ಕೂರ್ಮರೂಪನಾಗಿ ಅಮರರಿಗೊಲಿದು ನೀ
ಕಾಮಜನಕ ಸುಪ್ರೇಮಾವನಿತ್ಯಂತೆ4 2
ವರಹರೂಪನಾಗಿ ಧರಣಿಯ ಚೋರನ
ಶಿರವ ತಂದು ನೀ ಜಗವ ಪೊರೆದ್ಯಂತೆ 3
ತರಳನ ನುಡಿ ಕೇಳಿ ದುರುಳ ರಕ್ಕಸನ
ಕರುಳ ತೆಗೆದು ನಿನ್ನ ಕೊರಳೊಳಗಿಟ್ಯಂತೆ 4
ಚೆಲುವತನದಿ ಪೋಗಿ ಬಲಿಯದಾನವ ಬೇಡಿ
ಕಲುಷ ಹರಿಸಿ ಅವನ ಪಾತಾಳಕ್ಕೊತ್ತಿದ್ಯಂತೆ 5
ಕೊಡಲಿಯ ಪಿಡಿಯುತ ದುಗುಡ ರಾಯರುಗಳ ಸೊ
ಗಡು ಮುರಿದು ನೀ ಸಡಗರ ಪಟ್ಯಂತೆ 6
ಸೀತೆಗೋಸ್ಕರ ಪೋಗಿ ಸೇತುವೆಯನೆ ಕಟ್ಟಿ
ಭೂತ ರಾವಣನ ಖ್ಯಾತಿಯಿಂದಲಿ ಕೊಂದ 7
ವಾರಿಜಾಕ್ಷಿಯರ ಕೂಡಿ ನೀರಾಟದೊಳು ಪೊಕ್ಕು
ನೀರೆಯರ1 ಮನ ಅಪಹಾರಮಾಡಿದ ಕೃಷ್ಣ 8
ಚಿತ್ತಜಪಿತ ನೀನು ಬತ್ತಲೆಯೊಳು ಬಂದು
ಉತ್ತಮ ಸ್ತ್ರೀಯರ ವ್ರತಗಳಳಿದ್ಯಂತೆ 9
ಸುಂದರ ವಾಜಿಯ ಚೆಂದಾದಿಂದೇರುತ
ಮಂದಗಮನೆಯರ ನಂದವಳಿದ್ಯಂತೆ 10
ದೋಷರಹಿತ ನಮ್ಮ ಶೇಷವಿಠ್ಠಲನೆ
ಬ್ಯಾಸರವಿಲ್ಲದೆ ಪೋಷಿಸಿ ಸಲಹಲು 11
***