Kruti by galagali avva
ಬಾಗುವ ತೆಂಗಿನ ಮರನೋಡ
ರಂಗನ ಅಂಘ್ರಿಗೆರಗುವಂತೆ ಸಖಿಯೆ ಪ.
ಶೃಂಗಾರದ ವನ ನೋಡ ಪಂಚರಂಗದ ಗಿಳಿ ನೋಡ
ಮಂಗಳ ಸ್ವರ ನೋಡ ಕೋಕಿಲ ರಂಗನ ಪಾಡುತಲಿವೆ 1
ಜಾತಿ ಹಂಸನೋಡ ವನದೊಳು ಮಾತಿನ ಗಿಳಿ ನೋಡ
ಸಖಿಯೆನೂತನ ಮೃಗ ನೋಡ
ಕಸ್ತೂರಿ ಹರಿಪಾದಕೆ ಆತುರದಿ ಬರುತಲಿವೆ 2
ನೆಲ್ಲಿ ನೇರಲೆ ನೋಡ ಪುಷ್ಪ ಚೆಲ್ಲಿ ನಲಿಯುತಲಿವೆ ಮಲ್ಲ ಮಲ್ಲಿಗೆ ನೋಡ ಹರಿಪಾದ ಪಲ್ಲವಕೆ ಎರಗುತಿವೆ 3
ಚಾರು ಕೋನವ ನೋಡ ಕಮಲವು ತೂರಿ ಬರುತಲಿವೆ ಸಾರ ಪಕ್ಷಿಗಳ ನೋಡ ಹರಿಗುಣ ಸಾರುತ ನಲಿಯುತಿವೆ4
ನಾಗ ಪುನ್ನಾಗ ನೋಡ ಸಂಪಿಗೆ ಪರಿಮಳ ನೋಡ ಹಾಂಗೆ ಕ್ಯಾದಿಗೆ ನೋಡ ಹರಿಪಾದ ಕ್ಹೋಗಿ ಎರಗುತಿವೆ 5
ಜಾಜಿ ಕುಸುಮ ನೋಡ ತುಳಸಿ ವಿರಾಜಿಸುªವನÀ ನೋಡ
ಸಹಜದವನವ ನೋಡ ರಂಗನ ಪೂಜೆಗೆ ಒದಗುವಂತೆ 6
ಮಂದ ಮಾರುತ ನೋಡ ಪರಿಮಳ ತಂದು ಬೀಸುತಲಿದೆ ಸುಂದರ ಲತೆ ನೋಡ ರಂಗಗೆ ಫಲ ತಂದು ಅರ್ಪಿಸುವಂತೆ7
ಓಕುಳಿ ಕುಣಿನೋಡ ನಿಲ್ಲಿಸಿದ ಜೀಕಳಿ ಗೊಂಬೆಗಳ ಲೋಕ ನಾಯಕ ಹರಿಗೆ ಚಿಮ್ಮುತ ಹಾಕುವ ಪರಿಯಂತೆ 8
ಸಾಲು ಮರಗಳ ನೋಡ ರಂಗಗೆ ಫಲ ಮೇಲಾಡಿ ಮೆಲಿಸುವಂತೆ ಲಾಲಿಮಣಿಯ ನೋಡ ರಾಮೇಶನ ವಾಲೈಸಿ ಕರೆಯುತಿವೆ9
****