Showing posts with label ಬಾರಯ್ಯ ಗುರು ಸ್ವಾಮಿ ಶ್ರೀಸದ್ಗುರು ಎನ್ನ ಮನೋಮಂದಿರಕೆ mahipati. Show all posts
Showing posts with label ಬಾರಯ್ಯ ಗುರು ಸ್ವಾಮಿ ಶ್ರೀಸದ್ಗುರು ಎನ್ನ ಮನೋಮಂದಿರಕೆ mahipati. Show all posts

Wednesday, 1 September 2021

ಬಾರಯ್ಯ ಗುರು ಸ್ವಾಮಿ ಶ್ರೀಸದ್ಗುರು ಎನ್ನ ಮನೋಮಂದಿರಕೆ ankita mahipati

ಬಾರಯ್ಯ ಗುರು ಸ್ವಾಮಿ ಶ್ರೀಸದ್ಗುರು ಎನ್ನ ಮನೋಮಂದಿರಕೆ ಕರುಣಾನಂದದ ಸುಖ ಬೀರುತ ಬಾರೈ ಆತ್ಮಾನುಭವಕೆ ಪ  


ಕಣ್ಣು ಹಾರುತಿದೆÀ ಬಲದೆನ್ನ ಖೂನದೋರವ್ಹಾಂಗಿಂದು ಚೆನ್ನಾಗ್ಹೊಳಿಯುತಿ ಸುಚಿಹ್ನ ನೀನೊಲಿಯವ್ಹಾಂಗೆ ಬಂದು ಎನ್ನೋಳೀವ್ಹಾಂಗ ಸನಾತನ ಪಾಲಿಸಿದೆನಗೊಂದು ಧನ್ಯಗೈಸುವ ದಯಾಳು ನೀನಹುದೊ ಕೃಪಾಸಿಂಧು 1 

ಏನೊಂದರಿಯೆ ಒಂದು ಸಾಧನ ಧ್ಯಾನಮೌನ ಹ್ಯಾಗೆಂದು ಖೂನಬಲ್ಲೆನೊ ನಿಮ್ಮ ಬಿರುದಿನ ದೀನನಾಥ ನೀ ಎಂದು ನ್ಯೂನಾರಿಸದೆನ್ನೊಳಗಿನ ನೀನೆ ಅನಾಥಬಂಧು ಎನಗುಳ್ಳ ಸ್ವಾಮಿ ಸದೋದಿತ ನೀನಹುದೊ ಎಂದೆಂದು 2 

ತಾಯಿ ಶಿಶುಸ್ತನಪಾನಕೆ ಬಾಯಿಯೊಳಗಿಡುವ್ಹಾಂಗ ಸಾಯಾಸವಿಲ್ಲದೀಪರಿ ದಯಮಾಡುವದೆನಗೆ ಶ್ರೇಯಸುಖದಾಯಕೊಬ್ಬನು ನೀನೆ ಭಾನುಕೋಟಿ ಎನಗೆ ಅನುದಿನ ದೀನಮಹಿಪತಿಗೆ 3

***