ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೈಯ್ಯಾ ಗೋವಿಂದಾ | ಕೀರ್ತನೆಗೆ ಮುಕುಂದಾ | ಬೀರುತ ನಿಮ್ಮ ಮಹಿಮೆ ಸ್ವಾನಂದ ಪುರದಿಂದಾ ಪ
ಕೋಂಡಾಡುವಂತೆ ಕೀರ್ತಿ ನೀಡಬೇಕು ನಿಜಸ್ಪೂರ್ತಿ | ಮಂಡೀಸಿ ಭಕ್ತರಂಗಾ ಹೇಳುವೆ ನಿಮ್ಮ ವಾರ್ತೆ 1
ವೈಕುಂಠ ಯೋಗಿವರಿಯಾ ಸ್ಥಳಸುರ ಮುನಿರಾಯಾ | ನೀ ಕರಿಸಿ ಪಾಡುವಲ್ಲಿ ಇಹನೆಂದೆ ನಿಶ್ಚಯಾ 2
ಕಂದನ ತೊದಲು ಮಾತಾ ಕೇಳಿ ಹಿಗ್ಗುವಂತೆ ಮಾತಾ | ತಂದೆ ಮಹಿಪತಿ - ಸ್ವಾಮಿ ಬಲವಾಗೋ ಶ್ರೀ ಕಾಂತಾ3
***