Showing posts with label ಬಾರೋ ಬಾರೆಲೋ ಹೃದಯ ವಾರಿಜದೊಳುಬಾರಿ indiresha. Show all posts
Showing posts with label ಬಾರೋ ಬಾರೆಲೋ ಹೃದಯ ವಾರಿಜದೊಳುಬಾರಿ indiresha. Show all posts

Monday, 2 August 2021

ಬಾರೋ ಬಾರೆಲೋ ಹೃದಯ ವಾರಿಜದೊಳುಬಾರಿ ankita indiresha

ಬಾರೋ ಬಾರೆಲೋ ಹೃದಯ ವಾರಿಜದೊಳುಬಾರಿ ಬಾರಿಗೆ ಕರೆವೆ ನಿನ್ನ ಮೋರೆ ತೋರೆಲೋ ಪ


ಪುಟ್ಟ ಪಾದವ ಕ್ಷಿತಿಯೊಳಿಟ್ಟು ಮೋದವ ಕೊಟ್ಟು ಭಕ್ತರಿಗೆ ತೋರೋ ಕೃಷ್ಣ ರೂಪವಾ 1

ಸಿಂಧು ಮಥಿಸಿದಿ ಸುಧೆಯ ತಂದು ಬಡಿಸಿದಿ ಕೃಷ್ಣಾಚಂದದಿಂದ ದೇವತೆಗಳ ವೃಂದ ಸಲಹಿದಿ 2

ಇಂದು ವದನನೆ ಶಾಮಸುಂದರಾಂಗನೇಆನಂದದಿಂದ ತೋರೋ ಎನಗೆ ಕುಂಜಹೃದಯನೇ 3

ಇಂದಿರೇಶನೆ ಭವೇಂದ್ರ ವಂದ್ಯನೆ ಕೃಷ್ಣಾ ನಿನ್ನಕಂದನೆಂದು ಕರೆಯೋ ಎನ್ನ ನಂದ ಬಾಲನೇ4

****