..
ಬಾರೊ ಬಾರೊ ರಂಗ-ಬಾರೊ ನಮ್ಮನೆಗೆ ಪ
ಬೋರನ್ಹಾಕುವೆ ನಡೆಮುಡಿಯ ನಿಮ್ಮಡಿಗೆ ಅ.ಪ
ಪರಿಮಳಾಂಬುವಿನಿಂದ-ಪದವ ತೊಳೆಯುವೆನೊ
ವರಗಂಧಾಕ್ಷತೆಯನು-ಭರದಿ ಧರಿಸುವೆನೋ 1
ಹೊಸಪಟ್ಟೆಯನು ತಂದು-ಹೊಂದಿಸಿ ರಾಜಿಸುವೆ
ಕುಸುಮದಿಂದರ್ಚಿಸಿ ಕೂಡೆ ಸಂತಸವ 2
ಕುಂಕುಮಾಗಿಲು ದಿವ್ಯ ಗುಗ್ಗುಲಹೊಗೆಯ
ಬಿಂಕದಿಂದರ್ಪಿಸುವೆನು ಭೋಗಿಸಯ್ಯಾ 3
ಮೇಲೆ ಸದ್ಭಕ್ಷ್ಯ ತಾಂಬೂಲವರ್ಪಿಸುವೆ
ಲಾಲಿತ ಮಹಮಂಗಳಾರತಿಯೀವೆ 4
ಬಿಡದೆ ಸಾಷ್ಟಾಂಗವ ನಿಡುವೆ ರಮೇಶ
ಪೊಡವಿಯೊಳ್ ಮಹದೇವಪುರದ ಶ್ರೀಹರಿಯೆ5
***
****