Showing posts with label ಬಿಟ್ಟಿರಲಾರೆ ಬಾ ಗೋವಿಂದಾ ಸೃಷ್ಟಿಶಾನಂದ vijayaramachandra vittala BITTIRALAARE BAA GOVINDA SRUSHTISHAANANDA. Show all posts
Showing posts with label ಬಿಟ್ಟಿರಲಾರೆ ಬಾ ಗೋವಿಂದಾ ಸೃಷ್ಟಿಶಾನಂದ vijayaramachandra vittala BITTIRALAARE BAA GOVINDA SRUSHTISHAANANDA. Show all posts

Sunday, 5 December 2021

ಬಿಟ್ಟಿರಲಾರೆ ಬಾ ಗೋವಿಂದಾ ಸೃಷ್ಟಿಶಾನಂದ ankita vijayaramachandra vittala BITTIRALAARE BAA GOVINDA SRUSHTISHAANANDA



Kruti by ವಿಜಯರಾಮಚಂದ್ರ ವಿಠಲ ದಾಸರು mysore kattemane 


ಬಿಟ್ಟಿರಲಾರೆ ಬಾ ಗೋವಿಂದಾ ಸೃಷ್ಟಿಶಾನಂದ ಪ


ಬಿಟ್ಟಿರಲಾರೆ ಮನಮುಟ್ಟಿ ಭಜಿಪೆನಯ್ಯ

ಅಷ್ಟಮಹಿಷೇರ ಸಹಿತ ನಾಟ್ಯವಾಡುತ ಬೇಗ ಬಾ ಅ.ಪ


ಗೊಲ್ಲರ ಮನೆ ಪೊಕ್ಕು ಪಾಲ್ಬೆಣ್ಣೆಗಳ ಮೆದ್ದು

ಚೆಲ್ವ ಲಲನೇರ ಗಲ್ಲ ಮುದ್ದಾಡುತ ಬೇಗ 1


ಮಂದಗಮನೆಯರ ಮಂದಹಾಸದಿ ಅಪ್ಪಿ

ದ್ವಂದ್ವ ಕುಚದಲ್ಲಿಟ್ಟ ನಂದಜ ಕರಗಳಿಂದ 2


ಮಿರಿಮಿರಿ ಮಿಂಚುವ ಕಿರೀಟ ಕುಂಡಲ

ಧರಿಸಿ ವಾರೆ ನೋಟದಿ ನಾರೇರ ಮನ ಸೆಳೆವ 3


ಸುಮನಸರೊಂದಿತ ಯಮುನಾ ಪುಳಿನದಿ

ವಿಮಲ ವೇಣುಸ್ವರದಿ ಕಮಲಾಕ್ಷಿಯರೊಲಿಸಿದ 4


ಶ್ರೀವತ್ಸ ಕೌತ್ಸುಭ ಪವಳ ಮುತ್ತಿನಹಾರ

ನ್ಯಾವಳ ಸರಿಗಿಟ್ಟು ಗೋವಳರೊಡಗೂಡಿ 5


ತುತ್ತೂರಿ ಝಾಂಗಟೆ ಒತ್ತಿ ಪಿಡಿದಿಹ ಕಹಳೆ

ಬತ್ತೀಸ ರಾಗದಿ ತತ್ಥೈವಾದ್ಯದೀ 6


ಎತ್ತಿ ಪಿಡಿದಿಹ ಛತ್ರಿ ಸುತ್ತು ಮಾಗಧ ಮಂದಿ

ಸ್ತೋತ್ರವ ಮಾಡೆ ನೇತ್ರೋತ್ಸವ ತೋರುತ 7


ದಿವಪನ ಸೋಲಿಪ ನವ ಪೀತಾಂಬರ ಧರಿಸಿ

ಭುವನವ ಮೋಹಿಪ ನವ ಸುವಿಶೇಷನೆ 8


ವಿಜಯ ರಾಮಚಂದ್ರವಿಠಲರಾಯನೆ

ನಿಜ ಪರಿವಾರದಿಂ ಭಜಕರ ಪಾಲಿಪ 9

***