Showing posts with label ಬಿಟ್ಟು ಬರಲಾರಳಮ್ಮಯ್ಯಪಟ್ಟಮಂಚವ ಭಾವೆಬಿಟ್ಟರೆ ರುಕ್ಮಿಣಿ ramesha. Show all posts
Showing posts with label ಬಿಟ್ಟು ಬರಲಾರಳಮ್ಮಯ್ಯಪಟ್ಟಮಂಚವ ಭಾವೆಬಿಟ್ಟರೆ ರುಕ್ಮಿಣಿ ramesha. Show all posts

Wednesday, 4 August 2021

ಬಿಟ್ಟು ಬರಲಾರಳಮ್ಮಯ್ಯಪಟ್ಟಮಂಚವ ಭಾವೆಬಿಟ್ಟರೆ ರುಕ್ಮಿಣಿ ankita ramesha

 ..

ಬಿಟ್ಟು ಬರಲಾರಳಮ್ಮಯ್ಯಪಟ್ಟಮಂಚವ ಭಾವೆಬಿಟ್ಟರೆ ರುಕ್ಮಿಣಿ ಕೃಷ್ಣನ ಬೆರೆದಾಳೆಂಬೊ ಅಂಜಿಕೆಯಿಂದ ಪ.

ಭಕ್ತವತ್ಸಲನ ಪಾದ ಸಿಕ್ಕಿತೋ ಸಿಗದೆಂದುಚಿಕ್ಕ ಚನ್ನಿಗಳ ಕೈವಶಚಿಕ್ಕ ಚನ್ನಿಗಳ ಕೈವಶವಾಗದಂತೆಜಪ್ಪಿಸಿಕೊಂಡು ವಟವಾದಳೆ 1

ಶಂಬರಾರಿ ಪಿತನ ತಂಬುಲಸಿಗದೆಂದು ಚುಂಬನದ ಸಮಯ ಚಿಗಿಳೀತುಚುಂಬನದ ಸಮಯ ಚಿಗಿಳೀತು ಎಂತೆಂಬೊಹಂಬಲದಿ ಒಳಗೆ ಕುಳಿತಳೆ2

ನಲ್ಲೆ ರಂಗಯ್ಯನ ಎಲ್ಲೆಲ್ಲಿ ಬಿಡಲೊಲ್ಲೆಎಲ್ಲ ನಾರಿಯರ ನೆರವಿಕೊಂಡುಎಲ್ಲ ನಾರಿಯರ ನೆರವಿಕೊಂಡು ಮನೆಯೊಳುನಿಲ್ಲಗೊಡರೆಂಬೊ ಭಯದಿಂದ3

ಜಗದೊಡೆಯನ ಒಗೆತನ ನಗೆಗೀಡಾಯಿತು ನೋಡೆ ಈ ಬಗೆ ಎಲ್ಲೆ ಕಾಣೆ ಜಗದೊಳು ಈ ಬಗೆ ಎಲ್ಲೆ ಕಾಣೆ ಜಗದೊಳು ರುಕ್ಮಿಣಿ ತಗಿ ನಿನ್ನನಡತೆ ತರವಲ್ಲ4

ಅನಂತ ಮಹಿಮಗೆ ಇನ್ನೆಂಥ ಕಾವಲತನ್ನ ನಿಜರೂಪ ಅವರಲ್ಲಿತನ್ನ ನಿಜರೂಪ ಅವರಲ್ಲಿ ರಮಿಸೋದುತನ್ನ ಮನದಲ್ಲಿ ನಿಜ ಮಾಡಿ5

ಸಾಗರಶಾಯಿ ಮನಕೆ ಹ್ಯಾಂಗೆ ಬಂದೀತುಎಂದು ಹೀಗೆ ಕೈ ಮುಗಿದು ತಲೆಬಾಗಿಹೀಗೆ ಕೈ ಮುಗಿದು ತಲೆಬಾಗಿ ರುಕ್ಮಿಣಿಆಗೊಂದು ಮನದ ಬಯಕೆಲ್ಲ6

ಎಷ್ಟು ಜಪಿಸಿ ನೀನು ಠಕ್ಕಿಸಿ ಕೃಷ್ಣನ ಇಟ್ಟಾನೆ ರಮಿಯ ಎದಿಮ್ಯಾಲೆ ಇಟ್ಟಾನೆ ರಮಿಯ ಎದಿಮ್ಯಾಲೆ ರುಕ್ಮಿಣಿ ಇಷ್ಟರ ಮ್ಯಾಲೆ ತಿಳಕೊಳ್ಳ7

****