Showing posts with label ಬೀದಿಯೊಳು ಯಾತರಾ ನಂಟು ಬೇಡ ದಮ್ಮಯ್ಯ neleyadikeshava. Show all posts
Showing posts with label ಬೀದಿಯೊಳು ಯಾತರಾ ನಂಟು ಬೇಡ ದಮ್ಮಯ್ಯ neleyadikeshava. Show all posts

Wednesday, 1 September 2021

ಬೀದಿಯೊಳು ಯಾತರಾ ನಂಟು ಬೇಡ ದಮ್ಮಯ್ಯ ankita neleyadikeshava

 ..

ಬೀದಿಯೊಳು ಯಾತರಾ ನಂಟು ಬೇಡ ದಮ್ಮಯ್ಯ ಪ


ಭೇದಿಸಿ ನೋಡುವರುಂಟು ಬೆಂಬತ್ತಿ ಬಾರದಿರಯ್ಯ ಅ


ಕಂಡ ಕಂಡ ಠಾವಿನಲಿ ಕಣ್ಣೆತ್ತಿ ನೋಡದಿರಯ್ಯಕಂಡಿಯೊಳು ಕೈಸನ್ನೆ ಮಾಡದಿರಯ್ಯಗಂಡನುಳ್ಳವಳ ಜೊತೆ ಭಂಡಾಟವ್ಯಾಕಯ್ಯಕೊಂಡೆಗಾತಿಯರುಂಟು ದುಡುಕದಿರಯ್ಯ 1


ಬೇಳುವೆಯ ಮಾತಾಡಿ ಗಾಳ ಹಾಕದಿರಯ್ಯಬಾಳೆ ಹಣ್ಣಿಗೆ ಕೊಡಲಿ ಬೇಕೆ ದಮ್ಮಯ್ಯಆಳುವ ಅರಸಾಗಿ ನಿನಗಾವ ಬರವಯ್ಯಮೇಳದವರ ಬಿಟ್ಟು ಮೇರೆದಪ್ಪುವರೇನಯ್ಯ 2


ನೋಡುವರು ಜನರೆಲ್ಲ ನಾಚಿಕೆ ಇಲ್ಲವೇನಯ್ಯಜೋಡು ಕಳಸವ ಹಿಡಿಯದಿರು ಜೋಕೆ ದಮ್ಮಯ್ಯಮಾಡುವ ದೈನ್ಯ ಬಲ್ಲೆ ಮದ್ದೂರು ನರಸಿಂಹಯ್ಯಕೂಡಿದ ಕನಕನಾದಿಕೇಶವ ನೀನಹುದಯ್ಯ 3

***