ಕಾಖಂಡಕಿ ಶ್ರೀ ಮಹಿಪತಿರಾಯರು
ಬೆಜ್ಜರವಿಡಿಯಲು ಗುರುಭಕ್ತಿಗೆ ತಾ ಹೆಜ್ಜೆಜ್ಜಿಗೆ ನಿಧಾನ ಸಜ್ಜನರನುದಿನ ಕೊಡುವರು ಸುಖ ಸಾಮ್ರಾಜ್ಯದ ಸುಸನ್ಮಾನ ಪ
ಅಂಜಿಕೆಂಬುದು ಅಂಜನ ಕಣ್ಣಿಗೆ ಕಂಜನಾಭನ ಖೂನ ರಂಜಕವೆಂಬುದು ಇದೇ ಭಕ್ತರಿಗೆ ನಿಜತತ್ವದ ಸಾಧನ ರಂಜನೆದೋಲು ಒಣ ಭಂಜನೆ ತಾ ಪ್ರಾಂಜಳಾಗುರು ಙÁ್ಞನ ನಿರಂಜನ ಸೇವೆಯ ಮಾಡುದೆ ಪೂರ್ಣ 1
ಭಕ್ತಿಗೆ ಸಲಿಗಿ ಕೆಲಸಕೆ ಬಾರದು ಯುಕ್ತಿವಂತರು ನೋಡಿ ಶಕ್ತನಾದರೆ ಬಾಗಿರಬೇಕು ಅಹಂ ಭ್ರಮ ಈ ಡ್ಯಾಡಿ ಯುಕ್ತಿಗಿದೊಂದೇ ಕೀಲು ದೃಢ ಭಕ್ತಾಶ್ರಯ ಮಾಡಿ ಭೋಕ್ತಭಾವದ ಸದ್ಗುರುರಾಯ ತಾ ಬಾಹನು ಕೈ ಗೂಡಿ 2
ಅಂಜಂಜಿ ನಡೆದಮ್ಯಾಲೆ ಮಹಿಪತಿ ನಿಶ್ಯಂಕ ನೀನಾಗೊ ಅಂಜುವ ಭವಭಯ ನೀಗೊ ಗುಂಜಾಗಿಹ ಕರ್ಮದ ಬಾಧಿಯೊಳು ಸಿಲಕುವದೆಲ್ಲ ಸೋಂಗೊ ರಂಜಿಸುತಿ ಹ್ಯ ಸದ್ಗುರು ಪಾದಕೆ ನೀ ವಾಜಿಲಿ ಶರಣ್ಹೋಗೊ 3
***